ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ

Published 28 ಜೂನ್ 2024, 15:43 IST
Last Updated 28 ಜೂನ್ 2024, 15:43 IST
ಅಕ್ಷರ ಗಾತ್ರ

ಶಿಮ್ಲಾ: ಹಿಮಾಚಲ ಪ್ರದೇಶಕ್ಕೆ ಗುರುವಾರ ನೈರುತ್ಯ ಮುಂಗಾರು ಪ್ರವೇಶಿಸಿದ ಬೆನ್ನಲ್ಲೇ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ವಿವಿಧೆಡೆ ಶುಕ್ರವಾರ ಭಾರಿ ಮಳೆಯಾಗಿದೆ. ಹವಾಮಾನ ಇಲಾಖೆಯು ‘ಆರೆಂಜ್‌ ಅಲರ್ಟ್‌’ ಘೋಷಿಸಿದ್ದು, ರಾಜ್ಯದ 12 ಜಿಲ್ಲೆಗಳ ಪೈಕಿ 7 ಜಿಲ್ಲೆಗಳಲ್ಲಿ ಶನಿವಾರ ಮತ್ತು ಭಾನುವಾರ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂಬುದಾಗಿ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಮುಂದಿನ ಗುರುವಾರದವರೆಗೆ ಮಳೆ ಮುಂದುವರೆಯಲಿದೆ. ಸೋಮವಾರ ಮತ್ತು ಮಂಗಳವಾರ ಹೆಚ್ಚಿನ ಮಳೆಯಾಗಲಿರುವ ಹಿನ್ನೆಲೆಯಲ್ಲಿ ‘ಯೆಲ್ಲೊ ಅಲರ್ಟ್‌’ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಶಿಮ್ಲಾದ ಜಬ್ಬರ್‌ಹಟ್ಟಿಯಲ್ಲಿ ಕಳೆದ 24 ಗಂಟೆಗಳಲ್ಲಿ 170 ಮಿ.ಮೀ. ಮಳೆಯಾಗಿದ್ದು, ಶಿಮ್ಲಾದಲ್ಲಿ 93 ಮಿ.ಮೀ. ಮಳೆಯಾಗಿದೆ. ಕಾಂಗ್ರಾ ಮತ್ತು ಕುಲ್ಲು ಜಿಲ್ಲೆಯಲ್ಲಿ ತಲಾ ಒಂದು ರಸ್ತೆಗಳು ಮಳೆಗೆ ಹಾಳಾಗಿದ್ದು, ಸಂಚಾರ ದಟ್ಟಣೆ ಉಂಟಾಗಿದೆ. ಶಿಮ್ಲಾದ ಮಲ್ಯಾಣ– ಸುರಾಳ ರಸ್ತೆಯಲ್ಲಿ ನಿಲ್ಲಿಸಿದ್ದ ವಾಹನಗಳು ಭೂಕುಸಿತದಿಂದಾಗಿ ಮಣ್ಣಿನ ಅವಶೇಷಗಳ ಅಡಿ ಸಿಲುಕಿವೆ. ಯಾವುದೇ ಪ್ರಾಣಾಪಾಯ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಮುಂಗಾರಿನಿಂದ ಸಂಭವಿಸಬಹುದಾದ ಎಲ್ಲ ಸವಾಲುಗಳನ್ನು ಎದುರಿಸಲು ರಾಜ್ಯ ಸರ್ಕಾರ ಸನ್ನದ್ಧವಾಗಿದೆ. ಆದಾಗ್ಯೂ, ಮೇಘಸ್ಫೋಟ ಸಂಭವಿಸಿ ನದಿಗಳು ಉಕ್ಕಿ ಹರಿಯುವ ಸಾಧ್ಯತೆಯಿದ್ದು, ಜನರು ಮುಂಜಾಗ್ರತೆ ವಹಿಸುವಂತೆ ಮನವಿ ಮಾಡುತ್ತೇನೆ’ ಎಂದು ಮುಖ್ಯಮಂತ್ರಿ ಸುಖ್ವೀಂದರ್‌ ಸಿಂಗ್‌ ಸುಖು ತಿಳಿಸಿದ್ದಾರೆ.

ಶಿಮ್ಲಾದಲ್ಲಿ ಶುಕ್ರವಾರ ಭಾರಿ ಮಳೆ ನಡುವೆ ಜನರು ಕೊಡೆ ಹಿಡಿದು ಸಾಗಿದರು

ಶಿಮ್ಲಾದಲ್ಲಿ ಶುಕ್ರವಾರ ಭಾರಿ ಮಳೆ ನಡುವೆ ಜನರು ಕೊಡೆ ಹಿಡಿದು ಸಾಗಿದರು

–ಪಿಟಿಐ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT