ಮುಂಬೈ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿದ ಉಗ್ರ ಬಗ್ಗೆ ಮಾಹಿತಿ ನೀಡಿದವರಿಗೆ ₹10 ಲಕ್ಷ ಬಹುಮಾನ ನೀಡುವುದಾಗಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ ಶಿಂದೆ ನೇತೃತ್ವದ ಶಿವಸೇನಾ ಪಕ್ಷ ಘೋಷಿಸಿದೆ.

ನಾವು ಭಯೋತ್ಪಾದನೆ ಮತ್ತು ಅದನ್ನು ಬೆಂಬಲಿಸುವವರ ವಿರುದ್ಧ ದೃಢವಾಗಿ ನಿಲ್ಲುತ್ತೇವೆ. ಉಗ್ರರನ್ನು ಶಿಕ್ಷಿಸಲು ಸಹಾಯ ಮಾಡಲು ಬಯಸುವವರು ಯಾವುದೇ ಮಾಹಿತಿ ಇದ್ದರೆ, ತಕ್ಷಣ ಸಂಬಂಧಪಟ್ಟ ಅಧಿಕಾರಿಗಳಿಗೆ ನೀಡುವಂತೆ ನಾವು ಒತ್ತಾಯಿಸುತ್ತೇವೆ. ತಪ್ಪಿತಸ್ಥರನ್ನು ಹೊಣೆಗಾರರನ್ನಾಗಿ ಮಾಡುವುದು ಮತ್ತು ಉಗ್ರರ ದಾಳಿಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನ್ಯಾಯ ಒದಗಿಸುತ್ತೇವೆ ಎಂದು ಏಕನಾಥ ಶಿಂದೆ ತಿಳಿಸಿದ್ದಾರೆ.

ಏಕನಾಥ ಶಿಂದೆ ನೇತೃತ್ವದಲ್ಲಿ ಶಿವಸೇನಾವು ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾದ ಶಂಕಿತರ ಗುರುತು ಪತ್ತೆಗೆ ಕಾರಣವಾಗುವ ಮಾಹಿತಿಯನ್ನು ನೀಡುವವರಿಗೆ ₹10 ಲಕ್ಷ ಬಹುಮಾನ ನೀಡಲಾಗುವುದು ಎಂದು ಶಿವಸೇನಾದ ಸಾಮಾಜಿಕ ಮಾಧ್ಯಮ ಉಸ್ತುವಾರಿ ರಾಹುಲ್ ಕನಾಲ್ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಪೊಲೀಸರು ಈಗಾಗಲೇ ಮೂವರು ಶಂಕಿತರ ಚಿತ್ರಗಳನ್ನು ಬಿಡುಗಡೆಗೊಳಿಸಿದ್ದಾರೆ ಮತ್ತು ಅವರ ಬಗ್ಗೆ ಮಾಹಿತಿ ನೀಡಿದವರಿಗೆ ₹20 ಲಕ್ಷ ನೀಡುವುದಾಗಿ ಘೋಷಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.