ಮುಂಬೈ: ಪಶ್ಚಿಮ ಬಂಗಾಳದ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಶಿವಸೇನಾ ಪಕ್ಷವು ನಿರ್ಧರಿಸಿದೆ. ಇದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ, ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ರಾಜ್ಯಸಭಾ ಸದಸ್ಯ ಸಂಜಯ್ ರಾವುತ್ ಅವರು ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಶಿವಸೇನಾದ ಮುಖ್ಯ ವಕ್ತಾರ ಮತ್ತು ಸಾಮ್ನಾ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ಸಂಜಯ್ ರಾವುತ್ ಅವರು,‘ ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರೊಂದಿಗೆ ಚರ್ಚಿಸಿದ ನಂತರ ಶಿವಸೇನಾ ಪಕ್ಷವು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದೆ. ನಾವು ಆದಷ್ಟು ಬೇಗ ಕೋಲ್ಕತ್ತ ತಲುಪಲಿದ್ದೇವೆ’ ಎಂದಿದ್ದಾರೆ.

ಶಿವಸೇನಾದ ಹಿರಿಯ ನಾಯಕರ ತಂಡವು ಶೀಘ್ರದಲ್ಲೇ ಕೋಲ್ಕತ್ತಕ್ಕೆ ಭೇಟಿ ನೀಡಲಿದ್ದು, ಅಲ್ಲಿನ ಸ್ಥಳೀಯ ಘಟಕಗಳೊಂದಿಗೆ ಈ ಬಗ್ಗೆ ಚರ್ಚಿಸಲಿದೆ.

ಉದ್ಧವ್ ಠಾಕ್ರೆ ಮತ್ತು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಉತ್ತಮ ಸಂಬಂಧವನ್ನು ಹೊಂದಿದ್ಧಾರೆ. ಹಾಗಾಗಿ ಈ ಬಾರಿಯ ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯು ಭಾರಿ ಕೂತೂಹಲವನ್ನು ಮೂಡಿಸಿದೆ.

ಇದನ್ನೂ ಓದಿ:ಉದ್ಧವ್ ಠಾಕ್ರೆಗೆ ಬೇರೆ ಕೆಲಸ ಇಲ್ಲ: ಸಚಿವ ಪ್ರಭು ಚೌವಾಣ್ ತಿರುಗೇಟು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.