ನವದೆಹಲಿ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಬೆಂಬಲಿಸಿ ಶಿವಸೇನಾ ಕಾರ್ಯಕರ್ತರು ಭಾನುವಾರ ಇಲ್ಲಿನ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದರು.

ಪಕ್ಷದ ನಗರ ಉಸ್ತುವಾರಿ ಮಂಗಲರಾಮ್ ಮುಂಡೆ ನೇತೃತ್ವದಲ್ಲಿ ಶಿವಸೇನಾ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಿತು.

‘ಬಂಡಾಯ ಶಾಸಕರಿಗೆ ಭಯಪಡುವುದಿಲ್ಲ. ಯಾವುದೇ ಪರಿಸ್ಥಿತಿಯಲ್ಲಿ ನಾವು ಹಿಂದೆ ಸರಿಯುವುದಿಲ್ಲ’ ಎಂದು ಶಿವಸೇನಾ ದೆಹಲಿ ನಗರ ಘಟಕವು ಹೇಳಿಕೆ ನೀಡಿದೆ.

‘ಪಕ್ಷವನ್ನು ದುರ್ಬಲಗೊಳಿಸುತ್ತಿರುವವರು ಶಿವಸೇನಾ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ಅವರ ಆದರ್ಶಗಳನ್ನು ಅನುಸರಿಸುವವರಲ್ಲ’ ಎಂದು ಅದು ತಿಳಿಸಿದೆ.

ಸಚಿವ ಏಕನಾಥ ಶಿಂಧೆ ನೇತೃತ್ವದಲ್ಲಿ ಶಿವಸೇನಾದ ಕನಿಷ್ಠ 38 ಶಾಸಕರು ಮತ್ತು 10 ಪಕ್ಷೇತರರು ಅಸ್ಸಾಂನ ಗುವಾಹಟಿಯ ಹೋಟೆಲ್‌ವೊಂದರಲ್ಲಿ ಬೀಡುಬಿಟ್ಟಿದ್ದಾರೆ. ಅವರು ಉದ್ಧವ್ ಠಾಕ್ರೆ ನಾಯಕತ್ವದ ವಿರುದ್ಧ ಬಂಡಾಯವೆದ್ದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.