ಶಿವಮೊಗ್ಗ: ಕೇಂದ್ರ ಸರ್ಕಾರದ ‘ಸಾರ್ವಜನಿಕ ಉದ್ಯಮಗಳ ಸಮಿತಿ’ಗೆ 2026– 27ನೇ ಸಾಲಿಗೆ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಮರು ಆಯ್ಕೆಯಾಗಿದ್ದಾರೆ. ಈ ಮೂಲಕ ಸತತ ಮೂರನೇ ಬಾರಿಗೆ ಸಮಿತಿಯ ಸದಸ್ಯರಾಗಿ ಆಯ್ಕೆಯಾದ ಶ್ರೇಯಕ್ಕೆ ಪಾತ್ರರಾಗಿದ್ದಾರೆ.

ಕೇಂದ್ರ ಸರ್ಕಾರದ ಸಾರ್ವಜನಿಕ ವಲಯದ ಉದ್ಯಮಗಳ (ಪಿಎಸ್ಯು) ಕಾರ್ಯಕ್ಷಮತೆ, ಹಣಕಾಸು ನಿರ್ವಹಣೆ, ಪಾರದರ್ಶಕತೆ ಮತ್ತು ಆಡಳಿತಾತ್ಮಕ ಸುಧಾರಣೆಗಳನ್ನು ಈ ಸಮಿತಿಯು ಪರಿಶೀಲಿಸುತ್ತದೆ.

ಸಾರ್ವಜನಿಕ ಉದ್ಯಮಗಳಲ್ಲಿ ಪಾರದರ್ಶಕತೆ ತರಲು ಮತ್ತು ರಾಷ್ಟ್ರದ ಅಭಿವೃದ್ಧಿಗೆ ಪೂರಕವಾಗಿ ಕಾರ್ಯ ನಿರ್ವಹಿಸಲು ಈ ಅವಕಾಶವನ್ನು ಸಮರ್ಥವಾಗಿ ಬಳಸಿಕೊಳ್ಳಲಾಗುವುದು ಎಂದು ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-42-374482340

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.