ಶಿವಮೊಗ್ಗ: ‘ಕಾಂಗ್ರೆಸ್ ಎಲ್ಲಾ ಕಾಲದಲ್ಲೂ ಮಹಿಳಾ ಮೀಸಲಾತಿ ವಿರೋಧಿಸುತ್ತಾ ಬಂದಿದೆ. ಈಗ ಅದರ ಮುಂದುವರಿದ ಭಾಗವಾಗಿ ಲೋಕಸಭೆಯಲ್ಲಿ ನಾರೀಶಕ್ತಿ ವಂದನಾ ಮಸೂದೆಯನ್ನು ಸೋಲಿಸಿದೆ’ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು.

‘ಸಂಸತ್ನಲ್ಲಿ ಮಹಿಳಾ ಮೀಸಲಾತಿ ಕಾಯ್ದೆ ಸೋಲಿಸುವ ಮೂಲಕ ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ತಾವು ಮಹಿಳಾ ವಿರೋಧಿಗಳು ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿವೆ. 60 ವರ್ಷ ಆಡಳಿತ ನಡೆಸಿದರೂ ಮಹಿಳಾ ಮೀಸಲಾತಿ ಕಲ್ಪಿಸದ ಕಾಂಗ್ರೆಸ್ ಪಕ್ಷ ಈಗ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಕಾಯ್ದೆ ಜಾರಿಗೆ ತರಲು ಬಿಡಲಿಲ್ಲ’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರ್ಎಸ್ಎಸ್ ಅನ್ನು ವಿಷ ಜಂತುವಿಗೆ ಹೋಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅದು ಖಂಡನೀಯ. ಮಾಜಿ ಸಚಿವ ಕಿಮ್ಮನೆ ರತ್ನಾಕರ ಅವರು ಖರ್ಗೆ ಹೇಳಿದ ಮಾತನ್ನು ಸಮರ್ಥಿಸಿಕೊಂಡಿದ್ದಾರೆ. ಆರ್ಎಸ್ಎಸ್ ಬಹುದೊಡ್ಡ ಸಂಘಟನೆ. ನರೇಂದ್ರ ಮೋದಿ ಆಕಾಶದಲ್ಲಿರುವ ಸೂರ್ಯನಂತೆ, ಆ ಸೂರ್ಯನಿಗೆ ಉಗುಳಿದರೆ ನಮ್ಮ ಮೈಮೇಲೆ ಬೀಳುತ್ತದೆ. ಇದನ್ನು ಕಿಮ್ಮನೆ ರತ್ನಾಕರ ಅರ್ಥಮಾಡಿಕೊಳ್ಳಲಿ. ಆರ್ಎಸ್ಎಸ್ ಮತ್ತು ಮಹಿಳಾ ಮೀಸಲಾತಿಗೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರ ಜೊತೆ ಚರ್ಚೆಗೆ ಸಿದ್ಧ ಎಂದು ಕಿಮ್ಮನೆ ಹೇಳಿದ್ದಾರೆ. ನಾನೂ ಅವರೊಂದಿಗೆ ಚರ್ಚೆ ಮಾಡಲು ಸಿದ್ಧನಿದ್ದೇನೆ’ ಎಂದರು.

ಈ.ವಿಶ್ವಾಸ್, ಕೆ.ಈ.ಕಾಂತೇಶ್, ಕಾಚಿನಕಟ್ಟೆ ಸತ್ಯನಾರಾಯಣ, ಕುಬೇರಪ್ಪ, ಬಾಲು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-42-2012322245

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.