ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದೆಹಲಿಯ ‘ಬರ್ಗರ್‌ ಕಿಂಗ್‌’ ಮಳಿಗೆಯಲ್ಲಿ ಗುಂಡಿನ ದಾಳಿ: ಓರ್ವ ಸಾವು

Published 19 ಜೂನ್ 2024, 3:11 IST
Last Updated 19 ಜೂನ್ 2024, 3:11 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿಯ ರಜೌರಿ ಗಾರ್ಡನ್‌ನಲ್ಲಿನ ‘ಬರ್ಗರ್‌ ಕಿಂಗ್‌‘ ಮಳಿಗೆಯಲ್ಲಿ( ಔಟ್‌ಲೆಟ್‌) ನಿನ್ನೆ(ಮಂಗಳವಾರ) ತಡರಾತ್ರಿ ಮೂವರು ಅಪರಿಚಿತ ದುಷ್ಕರ್ಮಿಗಳು ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಹತ್ಯೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದಾಳಿಯ ವೇಳೆ ವ್ಯಕ್ತಿಗೆ ಅನೇಕ ಗುಂಡುಗಳು ತಗುಲಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಿದರೂ ಬದುಕುಳಿಯಲಿಲ್ಲ ಎಂದು ಪೊಲೀಸರು ಮಾಹಿತಿ ಹೇಳಿದ್ದಾರೆ.

ದಾಳಿ ನಡೆಯುವ ಸಮಯದಲ್ಲಿ ಅಲ್ಲಿಂದ ಓಡಿಹೋದ ಪ್ರತ್ಯಕ್ಷದರ್ಶಿಯೊಬ್ಬರು ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಅಪರಾಧ ವಿಭಾಗದ ಪೊಲೀಸರು ಸ್ಥಳನ್ನು ಪರಿಶೀಲಿಸಿ, ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ಸಂಬಂಧ ಪ್ರಕರಣವನ್ನು ದಾಖಲಿಸಿಕೊಂಡು ಸಿಸಿಟಿವಿ ಪರಿಶೀಲಿಸಿ, ಆರೋಪಿಗಳ ಪತ್ತೆಗೆ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT