ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೋಪಿಯಾನ್ ಎನ್‍ಕೌಂಟರ್: 6 ಉಗ್ರರ ಹತ್ಯೆ, ಓರ್ವ ಯೋಧ ಹುತಾತ್ಮ

Last Updated 25 ನವೆಂಬರ್ 2018, 5:19 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾನುವಾರ ನಡೆದ ಎನ್‍ಕೌಂಟರ್‌ನಲ್ಲಿ ರಕ್ಷಣಾ ಪಡೆ ಆರು ಮಂದಿಉಗ್ರರನ್ನು ಹತ್ಯೆ ಮಾಡಿದೆ. ಓರ್ವ ಯೋಧ ಹುತಾತ್ಮರಾಗಿದ್ದಾರೆ. ಇಲ್ಲಿನ ಕಪ್ರಾನ್ ಬತಾಗುಂಡ್ ಪ್ರದೇಶದಲ್ಲಿ ಬೆಳಗ್ಗೆ ಎನ್‍ಕೌಂಟರ್‌ ನಡೆದಿದೆ.

ಇದೀಗ ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.

ಪ್ರಸ್ತುತ ಪ್ರದೇಶದಲ್ಲಿಗುಂಡಿನ ಚಕಮಕಿ ಮುಂದುವರಿದಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ನವೆಂಬರ್ 20ರಂದು ಇದೇ ಜಿಲ್ಲೆಯ ನದಿಗಾಮ್ ಗ್ರಾಮದಲ್ಲಿ ನಡೆದ ಎನ್‍ಕೌಂಟರ್‌ನಲ್ಲಿ ಓರ್ವ ಯೋಧ ಹುತಾತ್ಮನಾಗಿದ್ದು ಮತ್ತು ನಾಲ್ವರು ಉಗ್ರರು ಹತರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT