ನವದೆಹಲಿ: ವಿಶ್ವ ಬ್ಯಾಂಕ್ ನೀಡಿರುವ ವರದಿಯ ಪ್ರಕಾರ ನಮ್ಮ ದೇಶದಲ್ಲಿ 22 ಲಕ್ಷ ನುರಿತ ಚಾಲಕರ ಕೊರತೆ ಇದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಈ ವಿಷಯ ತಿಳಿಸಿದ ಅವರು, ‘ರಸ್ತೆ ಅಪಘಾತಗಳಿಂದಾಗಿ ವಾರ್ಷಿಕ 1.8 ಲಕ್ಷ ಮಂದಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಚಾಲಕರಿಗೆ ತರಬೇತಿ ಸೌಕರ್ಯಗಳ ಲಭ್ಯತೆ ಇಲ್ಲದಿರುವುದು ಹಾಗೂ ಚಾಲಕರು ಅಗತ್ಯ ಪರಿಣತಿ ಹೊಂದದೆ ಇರುವುದರಿಂದ ಹೆಚ್ಚಿನ ಅಪಘಾತಗಳು ಸಂಭವಿಸಿವೆ. ಇದಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ದೇಶದಾದ್ಯಂತ ಚಾಲನಾ ತರಬೇತಿ ಸಂಸ್ಥೆಗಳನ್ನು ಆರಂಭಿಸುತ್ತಿದೆ’ ಎಂದು ತಿಳಿಸಿದ್ದಾರೆ.

₹4,500 ಕೋಟಿ ಮೊತ್ತದ ಈ ಯೋಜನೆಯಡಿ, ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ 1,600 ಚಾಲನಾ ತರಬೇತಿ ಕೇಂದ್ರಗಳನ್ನು ಹಂತಹಂತವಾಗಿ ಆರಂಭಿಸಲಾಗುವುದು. ಈ ಮೂಲಕ 60 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಲಾಗುವುದು ಎಂದೂ ತಿಳಿಸಿದ್ದಾರೆ.

ಕ್ಲಸ್ಟರ್ ವಿಧಾನವನ್ನು ಒಳಗೊಂಡಂತೆ ಚಾಲನಾ ತರಬೇತಿ ಮತ್ತು ಸಂಶೋಧನಾ ಸಂಸ್ಥೆ, ಪ್ರಾದೇಶಿಕ ಚಾಲನಾ ತರಬೇತಿ ಕೇಂದ್ರಗಳು ಮತ್ತು ಚಾಲನಾ ತರಬೇತಿ ಕೇಂದ್ರಗಳ ಸ್ಥಾಪನೆಗೆ ಸೂಕ್ತ ಪ್ರಸ್ತಾವನೆಗಳನ್ನು ಕಳುಹಿಸಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಕೋರಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.