ಸೋಮವಾರ, 14 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

₹10, ₹20 ನೋಟುಗಳನ್ನು ಮುದ್ರಿಸಲು RBIಗೆ ನಿರ್ದೇಶನ ನೀಡಿ:ನಿರ್ಮಲಾಗೆ ಸಂಸದರ ಪತ್ರ

ಕಡಿಮೆ ಮುಖಬೆಲೆ ನೋಟುಗಳ ಕೊರತೆ ಬಡವರನ್ನು ಕಾಡುತ್ತಿದೆ: ಕಾಂಗ್ರೆಸ್ ಸಂಸದ
Published : 21 ಸೆಪ್ಟೆಂಬರ್ 2024, 9:52 IST
Last Updated : 21 ಸೆಪ್ಟೆಂಬರ್ 2024, 9:52 IST
ಫಾಲೋ ಮಾಡಿ
Comments

ನವದೆಹಲಿ: ಕಡಿಮೆ ಮುಖಬೆಲೆಯ ನೋಟುಗಳ ತೀವ್ರ ಕೊರತೆಯಿಂದಾಗಿ ಬಡವರಿಗೆ ತೊಂದರೆಯಾಗುತ್ತಿದೆ. ಹಾಗಾಗಿ ₹10, ₹20 ಮತ್ತು ₹50 ಮುಖಬೆಲೆಯ ನೋಟುಗಳನ್ನು ಹೆಚ್ಚಾಗಿ ಮುದ್ರಿಸಲು ಆರ್‌ಬಿಐಗೆ ನಿರ್ದೇಶಿಸಲು ಮಧ್ಯಸ್ಥಿಕೆ ವಹಿಸುವಂತೆ ಒತ್ತಾಯಿಸಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಕಾಂಗ್ರೆಸ್‌ ಸಚೇತಕ ಮಾಣಿಕಂ ಟಾಗೋರ್‌ ಪತ್ರ ಬರೆದಿದ್ದಾರೆ.

ಕಡಿಮೆ ಮುಖಬೆಲೆಯ ನೋಟುಗಳ ಕೊರತೆಯು ಗ್ರಾಮೀಣ ಮತ್ತು ನಗರ ಪ್ರದೇಶದ ಬಡವರ ಮೇಲೆ ಪರಿಣಾಮ ಬೀರುತ್ತಿದೆ. ಯುಪಿಐ ಮತ್ತು ನಗದು ರಹಿತ ವಹಿವಾಟುಗಳನ್ನು ಉತ್ತೇಜಿಸಲು ಆರ್‌ಬಿಐ ಕಡಿಮೆ ಮುಖಬೆಲೆಯ ನೋಟುಗಳ ಮುದ್ರಣವನ್ನು ನಿಲ್ಲಿಸಿದೆ ಎಂದು ವರದಿಯಾಗಿರುವ ಬಗ್ಗೆ ವಿರುದುನಗರ ಸಂಸದರು ಆಗಿರುವ ಟಾಗೋರ್‌ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

₹10, ₹20 ಮತ್ತು ₹50 ಮುಖಬೆಲೆಯ ನೋಟುಗಳ ತೀವ್ರ ಕೊರತೆಯು ಅಪಾರ ಅನಾನುಕೂಲತೆಯನ್ನು ಉಂಟುಮಾಡಿದೆ. ಈ ನೋಟುಗಳ ಮುದ್ರಣವನ್ನು ನಿಲ್ಲಿಸುವುದರಿಂದ ಡಿಜಿಟಲ್ ಪಾವತಿ ವ್ಯವಸ್ಥೆಗೆ ಒಗ್ಗಿಕೊಳ್ಳದ ಜನರ ದೈನಂದಿನ ವಹಿವಾಟುಗಳ ಮೇಲೆ ಪರಿಣಾಮ ಬೀರುತ್ತದೆ. ವಿಶೇಷವಾಗಿ ಸಣ್ಣ ವ್ಯಾಪಾರಗಳು, ಬೀದಿ ವ್ಯಾಪಾರಿಗಳು ಮತ್ತು ನಗದು ವಹಿವಾಟಿನ ಮೇಲೆ ಹೆಚ್ಚು ಅವಲಂಬಿತರಾಗಿರುವ ದಿನಗೂಲಿ ನೌಕರರಿಗೆ ತೊಂದರೆಯಾಗಿದೆ ಎಂದು ಅವರು ಹೇಳಿದರು.

ಕಡಿಮೆ ಮುಖಬೆಲೆಯ ನೋಟುಗಳ ಮುದ್ರಣ, ವಿತರಣೆಯನ್ನು ಪುನರಾರಂಭಿಸುವುದು ಮತ್ತು ಸಾರ್ವಜನಿಕ ಬೇಡಿಕೆಯನ್ನು ಈಡೇರಿಸುವ ಮೂಲಕ ಈ ನೋಟುಗಳ ಸಮರ್ಪಕ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಆರ್‌ಬಿಐಗೆ ನಿರ್ದೇಶನ ನೀಡಬೇಕು ಎಂದು ನಿರ್ಮಲಾ ಸೀತಾರಾಮನ್‌ ಅವರಿಗೆ ಟ್ಯಾಗೋರ್ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT