ನವದೆಹಲಿ: 18 ವರ್ಷ ಮೇಲ್ಪಟ್ಟವರಿಗೂ ಕೋವಿಡ್ ಲಸಿಕೆ ವಿಸ್ತರಣೆ ಮಾಡಿದ್ದರಿಂದ ಲಸಿಕೆಯ ಕೊರತೆ ಉಂಟಾಯಿತು ಎಂದು ಕೋವಿಟ್ ಲಸಿಕೆ ಕೇಂದ್ರ ಸಮಿತಿಯ ಸದಸ್ಯ ಡಾ.ಎನ್‌ಕೆ ಅರೋರ ತಿಳಿಸಿದ್ದಾರೆ.

ಮುಂದಿನ ಎರಡು ತಿಂಗಳಲ್ಲಿ ಎಲ್ಲವೂ ಸರಿಯಾಗಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ. ಖಾಸಗಿ ಸುದ್ದಿ ವಾಹಿನಿ ಎನ್‌ಡಿಟಿಗೆ ನೀಡಿದ ಸಂದರ್ಶನದಲ್ಲಿ ಅವರು ಮಾತನಾಡಿದರು.

ಮೊದಲು ಘೋಷಣೆ ಮಾಡಿದಂತೆ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಪ್ರಕ್ರಿಯೆಯನ್ನು ನಾವು ಮುಂದುವರೆಸಬೇಕಿತ್ತು ಆದರೆ 18 ವರ್ಷ ಮೇಲ್ಪಟ್ಟವರಿಗೂ ಲಸಿಕೆ ವಿಸ್ತರಣೆ ಮಾಡಿದ್ದರಿಂದ ಕೊರತೆಯಾಯಿತು ಎಂದು ಅವರು ಹೇಳಿದ್ದಾರೆ.

ಸ್ಥಳೀಯವಾಗಿ ಲಸಿಕೆ ಉತ್ಪಾದನೆಯನ್ನು ಹೆಚ್ಚಳ ಮಾಡಲಾಗಿದೆ. ವಿದೇಶಗಳಿಂದಲೂ ಲಸಿಕೆ ಆಮದು ಮಾಡಿಕೊಳ್ಳುವುದಕ್ಕೂ ಅವಕಾಶ ನೀಡಿರುವುದರಿಂದ ಒಂದೆರಡು ತಿಂಗಳಲ್ಲಿ ಎಲ್ಲವೂ ಸರಿಯಾಗಲಿದೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.