ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶ್ರದ್ಧಾ ವಾಲಕರ್‌ ಕೊಲೆಗಾರನಿಗೆ ಕಠಿಣ ಶಿಕ್ಷೆ ಖಚಿತ: ಅಮಿತ್‌ ಶಾ ಭರವಸೆ

Last Updated 26 ನವೆಂಬರ್ 2022, 11:32 IST
ಅಕ್ಷರ ಗಾತ್ರ

ನವದೆಹಲಿ:ಶ್ರದ್ಧಾ ವಾಲಕರ್‌ ಕೊಲೆ ಪ್ರಕರಣದ ಆರೋಪಿಗೆ ದೆಹಲಿ ಪೊಲೀಸರು ಮತ್ತು ಪ್ರಾಸಿಕ್ಯೂಷನ್ ಶೀಘ್ರವೇ ಕಠಿಣ ಶಿಕ್ಷೆ ನೀಡಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಭರವಸೆ ನೀಡಿದ್ದಾರೆ.

‘ಇಡೀ ಪ್ರಕರಣದ ಮೇಲೆ ಕಣ್ಣಿಟ್ಟಿದ್ದೇನೆ. ಈ ಕೃತ್ಯವನ್ನು ಯಾರೇ ಎಸಗಿದ್ದರೂ ಕಾನೂನು ಮತ್ತು ನ್ಯಾಯಾಲಯಗಳ ಮೂಲಕ, ದೆಹಲಿ ಪೊಲೀಸರು ಮತ್ತು ಪ್ರಾಸಿಕ್ಯೂಷನ್ ಸಾಧ್ಯವಾದಷ್ಟು ಬೇಗನೆ ಕಠಿಣ ಶಿಕ್ಷೆಯನ್ನು ಖಚಿತಪಡಿಸಲಿವೆ ಎನ್ನುವುದನ್ನು ದೇಶದ ಜನರಿಗೆ ಹೇಳಲು ಬಯಸುತ್ತೇನೆ’ ಎಂದು ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.

ದೆಹಲಿ ಹಾಗೂ ಮುಂಬೈ ಪೊಲೀಸರ ನಡುವೆ ಸಮನ್ವಯದ ಕೊರತೆ ಇಲ್ಲ ಎಂದೂ ಅವರು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.

ಶ್ರದ್ಧಾ ಅವರು ತಮಗೆ ಪ್ರಾಣ ಬೆದರಿಕೆ ಇದೆ ಎಂದು 2 ವರ್ಷಗಳ ಹಿಂದೆಯೇ ಬರೆದಿದ್ದ ಪತ್ರದ ಕುರಿತು ಪ್ರತಿಕ್ರಿಯಿಸಿರುವ ಶಾ, 'ಸದ್ಯ ಮುನ್ನಲೆಗೆ ಬಂದಿರುವ ಪತ್ರದ ವಿಚಾರದಲ್ಲಿ ದೆಹಲಿ ಪೊಲೀಸರ ಪಾತ್ರವಿಲ್ಲ. ಶ್ರದ್ಧಾ ತಮಗೆ ಕೊಲೆ ಬೆದರಿಕೆ ಇದೆ ಹಾಗೂತಮ್ಮ ದೇಹವನ್ನು ತುಂಡು ತುಂಡಾಗಿ ಕತ್ತರಿಸಲಾಗುತ್ತದೆ ಎಂದುಮಹಾರಾಷ್ಟ್ರದ ಪೊಲೀಸ್ ಠಾಣೆಯೊಂದಕ್ಕೆ ದೂರು ನೀಡಿದ್ದರು. ಆದಾಗ್ಯೂ, ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಆ ಬಗ್ಗೆ ತನಿಖೆ ನಡೆಯಲಿದೆ. ಆಗಮಹಾರಾಷ್ಟ್ರದಲ್ಲಿ ನಮ್ಮ ಸರ್ಕಾರ ಇರಲಿಲ್ಲ. ಕೃತ್ಯದಲ್ಲಿ ಯಾರೇ ಭಾಗಿಯಾಗಿದ್ದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು' ಎಂದು ಹೇಳಿದ್ದಾರೆ.

ಮಹಾರಾಷ್ಟ್ರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಆಶಿಶ್‌ ಶೆಲಾರ್‌ ಅವರು ಪೊಲೀಸರ ವೈಫಲ್ಯದ ಬಗ್ಗೆಬುಧವಾರ ಪ್ರಶ್ನಿಸಿದ್ದರು.ಕಾಲ್‌ಸೆಂಟರ್‌ ಉದ್ಯೋಗಿಯಾಗಿದ್ದ ವಾಲಕರ್‌ ಅವರು ಸಹಜೀವನ ಸಂಗಾತಿಆಫ್ತಾಬ್‌ ಅಮೀನ್‌ ಪೂನಾವಾಲಾನಿಂದ ಜೀವ ಬೆದರಿಕೆ ಇರುವುದಾಗಿ 2020 ನವೆಂಬರ್‌ನಲ್ಲಿ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಕಿಡಿಕಾರಿದ್ದರು.

ದಕ್ಷಿಣ ದೆಹಲಿಯ ಮಹ್ರೌಲಿಯತನ್ನ ಫ್ಲ್ಯಾಟ್‌ನಲ್ಲಿ ಆಫ್ತಾಬ್‌ ಅಮೀನ್‌ಪೂನಾವಾಲಾ ಕಳೆದ ಮೇನಲ್ಲಿ ಶ್ರದ್ಧಾಳನ್ನು ಕತ್ತು ಹಿಸುಕಿ ಕೊಂದಿದ್ದ. ನಂತರಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ, 300 ಲೀಟರ್ ಸಾಮರ್ಥ್ಯದ ಫ್ರಿಜ್‌ನಲ್ಲಿ ಸುಮಾರು ಮೂರು ವಾರಗಳವರೆಗೆ ಇರಿಸಿದ್ದ. ನಂತರ ಅವುಗಳನ್ನು ನಗರದ ವಿವಿಧೆಡೆ ಮತ್ತು ಛತರ್‌ಪುರ ಸಮೀಪದ ಅರಣ್ಯ ಪ್ರದೇಶದಲ್ಲಿ ಹಲವು ದಿನಗಳವರೆಗೆ ಒಂದೊಂದಾಗಿ ಬಿಸಾಡಿದ್ದ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT