ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದೆಹಲಿ | ಮುಚ್ಚಿದ್ದ ಪ್ರಗತಿ ಮೈದಾನದ ಸುರಂಗ ಮಾರ್ಗ ಸಂಚಾರಕ್ಕೆ ಮುಕ್ತ

Published 1 ಜುಲೈ 2024, 10:57 IST
Last Updated 1 ಜುಲೈ 2024, 10:57 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿಯಲ್ಲಿ ಕಳೆದ ವಾರ ಸುರಿದ ಭಾರಿ ಮಳೆಗೆ ಸ್ಥಗಿತಗೊಳಿಸಲಾಗಿದ್ದ ಪ್ರಗತಿ ಮೈದಾನದ ಸುರಂಗ ಮಾರ್ಗವನ್ನು ಇಂದು (ಸೋಮವಾರ) ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುರಂಗ ಮಾರ್ಗದಲ್ಲಿದ್ದ ನೀರನ್ನು ಸಂಪೂರ್ಣವಾಗಿ ಖಾಲಿ ಮಾಡಿದ್ದು, ಇಂದು ಈ ಮಾರ್ಗದಲ್ಲಿ ವಾಹನ ಸಂಚಾರ ಪ್ರಾರಂಭವಾಗಿದೆ ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ತಿಳಿಸಿದರು.

ಜೂನ್ 28ರಂದು ದೆಹಲಿಯಲ್ಲಿ ಭಾರಿ ಮಳೆ ಸುರಿದಿದ್ದು, ಆ ದಿನ ಬೆಳಿಗ್ಗೆ 8:30ಕ್ಕೆ ಕೊನೆಗೊಂಡಂತೆ 24 ಗಂಟೆಗಳಲ್ಲಿ 228.1 ಮಿಮಿ ಮಳೆ ದಾಖಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT