ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶ | ಎಸ್‌ಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಶ್ಯಾಮ್‌ ಲಾಲ್‌ ಪಾಲ್ ನೇಮಕ

Published 6 ಮೇ 2024, 12:50 IST
Last Updated 6 ಮೇ 2024, 12:50 IST
ಅಕ್ಷರ ಗಾತ್ರ

ಲಖನೌ: ಸಮಾಜವಾದಿ ಪಕ್ಷದ (ಎಸ್‌ಪಿ) ಉತ್ತರ ಪ್ರದೇಶದ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಶ್ಯಾಮ್‌ ಲಾಲ್‌ ಪಾಲ್ ಅವರನ್ನು ನೇಮಕ ಮಾಡಲಾಗಿದೆ. ಈ ಹಿಂದೆ ಅಧ್ಯಕ್ಷರಾಗಿದ್ದ ನರೇಶ್‌ ಉತ್ತಮ್ ಅವರು ಫತೇಹ್‌ಪುರ್‌ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಹೀಗಾಗಿ ಅವರ ಸ್ಥಾನಕ್ಕೆ ಶ್ಯಾಮ್‌ ಅವರನ್ನು ನೇಮಕ ಮಾಡಲಾಗಿದೆ. 

ಈ ಬಗ್ಗೆ ಪಕ್ಷವು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದೆ. ಉತ್ತಮ್ ಅವರು ಚುನಾವಣೆಯಲ್ಲಿ ನಿರತರಾಗಿರುವುದರಿಂದ ಈ ನೇಮಕ ಮಾಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. 

ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ತಮ್ಮನ್ನು ಮುಕ್ತಗೊಳಿಸುವಂತೆ ಉತ್ತಮ್‌ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್‌ ಯಾದವ್‌ ಅವರಿಗೆ ಪತ್ರ ಬರೆದಿದ್ದರು ಎಂದು ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ರಾಜೇಂದ್ರ ಚೌಧರಿ ತಿಳಿಸಿದ್ದಾರೆ. 

ಶ್ಯಾಮ್‌ ಈ ಹಿಂದೆ ಪ್ರಯಾಗರಾಜ್‌ನ ‌ಕಾಲೇಜಿನಲ್ಲಿ ಪ್ರಾಂಶುಪಾಲರಾಗಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT