ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮೋದಿ 'ನೀಟ್' ಸೈಲೆನ್ಸ್; ಪ್ರಧಾನಿ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

Published 16 ಜೂನ್ 2024, 5:11 IST
Last Updated 16 ಜೂನ್ 2024, 5:11 IST
ಅಕ್ಷರ ಗಾತ್ರ

ನವದೆಹಲಿ: ನೀಟ್ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಕುರಿತು ಪ್ರಧಾನಿ ನರೇಂದ್ರ ಮೌನವಾಗಿರುವುದು ಏಕೆ ಎಂದು ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಪ್ರಶ್ನೆ ಮಾಡಿದ್ದಾರೆ.

ಮೇ 5ರಂದು 4,750 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. 24 ಲಕ್ಷ ಆಕಾಂಕ್ಷಿಗಳು ಪರೀಕ್ಷೆ ಬರೆದಿದ್ದರು. ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬುದರ ಕುರಿತು ವ್ಯಾಪಕ ಆರೋಪಗಳು ಕೇಳಿ ಬಂದಿದ್ದವು.

ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಕಪಿಲ್ ಸಿಬಲ್, 'ನೀಟ್ ಪರೀಕ್ಷೆ. ಗುಜರಾತ್ ಫ್ಯಾಕ್ಟರ್. ಬಹಿರಂಗ ಭ್ರಷ್ಟಾಚಾರ. ಬಹಿರಂಗ ಮ್ಯಾನಿಪ್ಯುಲೇಷನ್. ದಯವಿಟ್ಟು ಗಮನಿಸಿ: ಮೋದಿ 'ನೀಟ್' ಸೈಲೆನ್ಸ್' ಎಂದು ಹೇಳಿದ್ದಾರೆ.

ನೀಟ್ ಪರೀಕ್ಷೆ ಫಲಿತಾಂಶದ ವಿವಾದಕ್ಕೆ ಸಂಬಂಧಿಸಿದಂತೆ 1,563 ವಿದ್ಯಾರ್ಥಿಗಳಿಗೆ ನೀಡಲಾದ ಕೃಪಾಂಕವನ್ನು ರದ್ದುಗೊಳಿಸಿ, ಆ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ತೆಗೆದುಕೊಳ್ಳಲು ಅವಕಾಶ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT