ರಾಷ್ಟ್ರೀಯ, ರಾಜ್ಯ, ವಿದೇಶ, ಸಿನಿಮಾ, ಕ್ರೀಡೆಗೆ ಸಂಬಂಧಿಸಿದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..

ರಾಜ್ಯ ಬಜೆಟ್ ಮಂಡನೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರಕಿದೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಐಎಎಫ್ನ Su -30 ಎಂಕೆಐ ಯುದ್ಧ ವಿಮಾನ ಪತನಗೊಂಡಿದ್ದು, ವಾಯುಪಡೆಯ ಇಬ್ಬರು ಸಿಬ್ಬಂದಿ ಮೃತಪಟ್ಟಿರುವ ಘಟನೆ ಅಸ್ಸಾಂನ ಕರ್ಬಿ ಅಂಗ್ಲಾಂಗ್ ಜಿಲ್ಲೆಯಲ್ಲಿ ಗುರುವಾಋ ನಡೆದಿದೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ದುಬೈ/ಟೆಹರಾನ್: ಅಮೆರಿಕ –ಇಸ್ರೇಲ್ ಮತ್ತು ಇರಾನ್ ನಡುವೆ ಆರು ದಿನಗಳಿಂದ ನಡೆಯುತ್ತಿರುವ ಯುದ್ಧವು ಪಶ್ಚಿಮ ಏಷ್ಯಾದ ಗಡಿಯಾಚೆಗೂ ವಿಸ್ತರಿಸಿದೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ನವದೆಹಲಿ: ‘₹10 ಸಾವಿರ ಕೋಟಿ ವೆಚ್ಚದ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯ ಪ್ರಸ್ತಾವನೆ ತಾಂತ್ರಿಕ ಅರ್ಹತೆ, ಪರಿಸರ ಸುಸ್ಥಿರತೆ ಹಾಗೂ ಸಾರ್ವಜನಿಕ ಹಿತಾಸಕ್ತಿ ಹೊಂದಿಲ್ಲ’ ಎಂದು ಅಭಿಪ್ರಾಯಪಟ್ಟಿರುವ ಕೇಂದ್ರ ಅರಣ್ಯ ಹಾಗೂ ಪರಿಸರ ಸಚಿವಾಲಯದ ತಜ್ಞರ ತಂಡವು, ‘ಈ ಯೋಜನೆಗೆ ಅನುಮತಿ ನೀಡುವುದು ಬೇಡ‘ ಎಂದು ಶಿಫಾರಸು ಮಾಡಿದೆ

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು: ವಿವಿಧ ಇಲಾಖೆಗಳಲ್ಲಿನ 56,432 ಹುದ್ದೆಗಳ ನೇಮಕಾತಿಗೆ ಮುನ್ನ ಒಳ ಮೀಸಲಾತಿಯನ್ನು ಅನ್ವಯಿಸಬೇಕು ಎಂಬ ವಿಷಯದಲ್ಲಿ ಬಲಗೈ–ಎಡಗೈ ಸಮುದಾಯಗಳನ್ನು ಪ್ರತಿನಿಧಿಸುವ ಸಚಿವರ ಮಧ್ಯೆ ಒಮ್ಮತ ಮೂಡದೇ ಇದ್ದುದರಿಂದ ಗುರುವಾರ ನಡೆದ ಸಚಿವ ಸಂಪುಟ ಸಭೆಯ ಯಾವುದೇ ನಿರ್ಣಯಕ್ಕೆ ಬಾರದೇ ಕೊನೆಗೊಂಡಿದೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಮುಂಬೈ: ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಮಹಾರಾಷ್ಟ್ರದಿಂದ ಎನ್ಸಿಪಿ(ಎಸ್ಪಿ) ವರಿಷ್ಠ ಶರದ್ ಪವಾರ್, ಅವರ ಮೊಮ್ಮಗ ಪಾರ್ಥ ಪವಾರ್ ಸ್ಪರ್ಧಿಸುತ್ತಿದ್ದಾರೆ.ಎನ್ಸಿಪಿ(ಎಸ್ಪಿ)ಯ ಸುಪ್ರಿಯಾ ಸುಳೆ ಪ್ರಸ್ತುತ ಲೋಕಸಭಾ ಸದಸ್ಯರಾಗಿದ್ದಾರೆ. ಶರದ್ ಪವಾರ್ ಹಾಗೂ ಪಾರ್ಥ ಅವರ ಗೆಲುವು ಬಹುತೇಕ ಖಚಿತ ಎನ್ನಲಾಗುತ್ತಿದೆ. ಇದರೊಂದಿಗೆ, ಪ್ರಭಾವಿ ಪವಾರ್ ಕುಟುಂಬದ ಮೂವರು ಸಂಸತ್ ಸದಸ್ಯರಾಗಿ ಕಾರ್ಯನಿರ್ವಹಿಸಲಿದ್ದಾರೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ನವದೆಹಲಿ: ತಮಿಳುನಾಡಿನ ರಾಜ್ಯಪಾಲ ಆರ್.ಎನ್.ರವಿ ಅವರನ್ನು ಪಶ್ಚಿಮ ಬಂಗಾಳದ ರಾಜ್ಯಪಾಲರನ್ನಾಗಿ ಗುರುವಾರ ನೇಮಿಸಲಾಗಿದೆ. ಸಿ.ವಿ. ಆನಂದ ಬೋಸ್ ಅವರ ರಾಜೀನಾಮೆ ಸ್ವೀಕಾರದ ಬಳಿಕ ಅವರ ಸ್ಥಾನಕ್ಕೆ ರವಿ ಅವರನ್ನು ನೇಮಕಗೊಳಿಸಲಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕಚೇರಿ ತಿಳಿಸಿದೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ನವದೆಹಲಿ: ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಹತರಾದ ಇರಾನ್ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ಉತ್ತರಾಧಿಕಾರಿ ಸ್ಥಾನಕ್ಕೆ ಇನ್ನೂ ಯಾರನ್ನೂ ಆಯ್ಕೆ ಮಾಡಿಲ್ಲ ಎಂದು ಇರಾನ್ನ ಅಧಿಕಾರಿಯೊಬ್ಬರು ಗುರುವಾರ ಮಾಹಿತಿ ನೀಡಿದ್ದಾರೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಬೈರೂತ್, ಲೆಬನಾನ್: ಹಿಜ್ಬುಲ್ಲಾ ಬಂಡುಕೋರ ಭದ್ರಕೋಟೆಯಾಗಿರುವ ಬೈರೂತ್ನ ದಕ್ಷಿಣ ಭಾಗದ ಪ್ರದೇಶಗಳ ಮೇಲೆ ಇಸ್ರೇಲ್ ಪಡೆಗಳು ಗುರುವಾರ ದಾಳಿ ನಡೆಸಿವೆ. ಘಟನೆಯಲ್ಲಿ 8 ಮಂದಿ ಮೃತರಾಗಿದ್ದಾರೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಮುಂಬೈ: ವಾಂಖೆಡೆ ಕ್ರೀಡಾಂಗಣದಲ್ಲಿ ಗುರುವಾರ ರಾತ್ರಿ ರನ್ಗಳ ಹೊಳೆ ಹರಿಯಿತು. ಅದರಲ್ಲಿ ಭಾರತ ತಂಡವು ಈಜಿ ಗೆದ್ದಿತು. ಆದರೆ ಕಠಿಣ ಪೈಪೋಟಿಯೊಡ್ಡಿದ ಇಂಗ್ಲೆಂಡ್ ತಂಡವು ಕ್ರಿಕೆಟ್ ಪ್ರಿಯರ ಮನಗೆದ್ದಿತು. ಇಲ್ಲಿ ನಡೆದ ಸೆಮಿಫೈನಲ್ನಲ್ಲಿ ಇಂಗ್ಲೆಂಡ್ ತಂಡವನ್ನು 7 ರನ್ ಗಳಿಂದ ಸೋಲಿಸಿದ ಭಾರತ ಫೈನಲ್ಗೆ ಲಗ್ಗೆ ಇಟ್ಟಿತು.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.