ಚಂಡೀಗಡ: ಪಂಜಾಬಿ ಗಾಯಕ ಸಿಧು ಮೂಸೆವಾಲಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 8 ಮಂದಿಯನ್ನು ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸರು ತಿಳಿಸಿದ್ದಾರೆ.
ಗಾಯಕನ ಮೇಲೆ ಗುಂಡಿನ ದಾಳಿ ನಡೆಸಿದವರಿಗೆ ರಕ್ಷಣೆ, ಸ್ಥಳದ ಬಗ್ಗೆ ಮಾಹಿತಿ ಸಂಗ್ರಹಣೆ ಮತ್ತು ಸರಕು ಸಹಕಾರ ನೀಡಿದ ಆರೋಪದ ಮೇರೆಗೆ ಈ ಆರೋಪಿಗಳನ್ನು ಬಂಧಿಸಲಾಗಿದೆ. ಅಲ್ಲದೆ, ಗಾಯಕನ ಮೇಲೆ ಗುಂಡಿನ ದಾಳಿ ನಡೆಸಿದ ನಾಲ್ವರನ್ನು ಗುರುತಿಸಲಾಗಿದೆ ಎಂದು ಮಂಗಳವಾರ ಪೊಲೀಸರು ಹೇಳಿದ್ದಾರೆ.
ಪಂಜಾಬ್ನ ಮಾನ್ಸ ಜಿಲ್ಲೆಯಲ್ಲಿ ಮೇ 29ರಂದು ಮೂಸೆವಾಲಾ ಅವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಟ್ಟು ಕೊಲೆ ಮಾಡಿದ್ದರು.