ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Video | Sikkim Flood: ಪ್ರವಾಹಕ್ಕೆ ನಲುಗಿದ ಸಿಕ್ಕಿಂ!

Published : 10 ಅಕ್ಟೋಬರ್ 2023, 11:36 IST
Last Updated : 10 ಅಕ್ಟೋಬರ್ 2023, 11:36 IST
ಫಾಲೋ ಮಾಡಿ
Comments

ಗ್ಯಾಂಗ್ಟಕ್‌: ಉತ್ತರ ಸಿಕ್ಕಿಂನ ತೀಸ್ತಾ ನದಿ ಪ್ರವಾಹದಿಂದಾಗಿ ಅಲ್ಲಿನ ಜನರ ಜೀವನ ಅಸ್ತವ್ಯಸ್ತವಾಗಿದೆ.

ಪ್ರವಾಹ ಪೀಡಿತ ಸಿಕ್ಕಿಂನ ಭೀಕರ ದೃಶ್ಯಗಳ ವಿಡಿಯೊವೊಂದನ್ನು ಸುದ್ದಿಸಂಸ್ಥೆ ಎಎನ್‌ಐ ಟ್ವೀಟ್‌ ಮಾಡಿದೆ. ಸಿಕ್ಕಿಂ ಬಹುತೇಕ ಭಾಗವು ನೀರಿನಿಂದಲೇ ಮುಳುಗಿರುವ ವೈಮಾನಿಕ ದೃಶ್ಯಗಳು ವಿಡಿಯೊದಲ್ಲಿದೆ.

ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಶನಿವಾರ ಮಂಗನ್ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸೇನೆ ಮತ್ತು ಸ್ಥಳೀಯ ಆಡಳಿತ ನಡೆಸುತ್ತಿರುವ ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಪರಿಶೀಲಿಸಿದರು. ನಾಗಾ, ರೆಲ್ ಮತ್ತು ಟೂಂಗ್ ವಾರ್ಡ್ ಗಳ ಪ್ರವಾಹ ಪೀಡಿತ ಕುಟುಂಬಗಳೊಂದಿಗೆ ಮಾತುಕತೆ ನಡೆಸಿದರು. ‌

ಉತ್ತರ ಸಿಕ್ಕಿಂನ ತೀಸ್ತಾ ನದಿ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 56ಕ್ಕೆ ಏರಿಕೆಯಾಗಿದೆ ಎಂದು ಸುದ್ದಿಸಂಸ್ಥೆ ಪಿಟಿಐ ಶನಿವಾರ ವರದಿ ಮಾಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT