ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಕ್ಕಿಂ | ಟ್ಯಾಂಕರ್‌ ಹರಿದು ಮೂವರು ಸಾವು, 16 ಮಂದಿಗೆ ಗಾಯ

Published 11 ಫೆಬ್ರುವರಿ 2024, 5:33 IST
Last Updated 11 ಫೆಬ್ರುವರಿ 2024, 5:33 IST
ಅಕ್ಷರ ಗಾತ್ರ

ಗ್ಯಾಂಗ್ಟಕ್: ಸಿಕ್ಕಿಂನ ಗ್ಯಾಂಗ್ಟಕ್ ಜಿಲ್ಲೆಯ ರಾಣಿಪೂಲ್‌ ಬಳಿ ಹಾಲಿನ ಟ್ಯಾಂಕರ್‌ ಹರಿದು ಮೂವರು ಮೃತಪಟ್ಟಿದ್ದು, 16 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಶನಿವಾರ ರಾತ್ರಿ ಹಾಲಿನ ಟ್ಯಾಂಕರ್ ಜನ ಸಂದಣಿ ಪ್ರದೇಶದತ್ತ ವೇಗವಾಗಿ ಬಂದ ಪರಿಣಾಮ ಈ ಅಪಘಾತ ಸಂಭವಿಸಿದೆ. ರಾಣಿಪೂಲ್‌ ಮೈದಾನದಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸಿತ್ತು. ಈ ವೇಳೆ ಜಮಾಯಿಸಿದ್ದ ಜನರ ಮೇಲೆ ಟ್ಯಾಂಕರ್ ಹರಿದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಟ್ಯಾಂಕರ್ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಎಲ್ಲಾ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ ಇಬ್ಬರು ಮಾರ್ಗ ಮಧ್ಯದಲ್ಲಿಯೇ ಮೃತಪಟ್ಟರೆ, ಇನ್ನೊಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಗಾಯಗೊಂಡವರ ಪೈಕಿ ಐವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಅವರು ರಾಣಿಪೂಲ್‌ನಲ್ಲಿ ಸಂಭವಿಸಿದ ಭೀಕರ ಅಪಘಾತಕ್ಕೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸುತ್ತೇನೆ ಎಂದು ಸಿಎಂ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT