ಸಿಂಧನೂರು: ‘ದುಡಿಯುವ ವರ್ಗದ ಸಮುದಾಯಗಳ ಹಿತಾಸಕ್ತಿ ಕಾಪಾಡಲು ನಿಸ್ವಾರ್ಥದಿಂದ ಶ್ರಮಿಸಿದರೆ ಪಕ್ಷದ ಸಂಘಟನೆ ವೃದ್ಧಿಯಾಗಲು ಸಾಧ್ಯವಾಗುತ್ತದೆ’ ಎಂದು ಭಾರತ ಕಮ್ಯುನಿಸ್ಟ್ ಪಕ್ಷದ ರಾಜ್ಯ ಘಟಕದ ಕಾರ್ಯದರ್ಶಿ ಸಾತಿ ಸುಂದರೇಶ ಕರೆ ನೀಡಿದರು.

ನಗರದ ರೈತ ಸಂಘದ ಕಾರ್ಯಾಲಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪಕ್ಷದ ಜಿಲ್ಲಾಮಟ್ಟದ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

‘ಅಮೆರಿಕ ಮತ್ತು ಇಸ್ರೇಲ್ ದೇಶಗಳು ಸೇರಿ ಇರಾನ್ ಮೇಲೆ ನಡೆಸುತ್ತಿರುವ ದಾಳಿ ಅತ್ಯಂತ ಕ್ರೂರ ಮತ್ತು ಅಮಾನವೀಯವಾಗಿದೆ. ಸಹಸ್ರಾರು ಜನರ ಬಲಿ ತೆಗೆದುಕೊಂಡಿರುವ ಅಮೆರಿಕದ ಕೃತ್ಯವನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸದೇ ಭಾರತದ ವಿದೇಶಾಂಗ ನೀತಿಯ ಪರಂಪರೆಯನ್ನು ಉಲ್ಲಂಘಿಸಿದ್ದಾರೆ’ ಎಂದು ಟೀಕಿಸಿದರು.

‘ಯುದ್ಧದ ಪರಿಣಾಮದಿಂದ ಭಾರತೀಯರು ಆರ್ಥಿಕ ಸಂಕಟ ಅನುಭವಿಸತೊಡಗಿದ್ದಾರೆ. ತೈಲ ಬೆಲೆ ಹೆಚ್ಚಳವಾಗಿರುವುದಲ್ಲದೇ ಅಗತ್ಯಕ್ಕೂ ಲಭಿಸದ ಕಾರಣ ಜನರು ಅನ್ನಕ್ಕಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣಗೊಂಡಿದೆ. ಸರ್ಕಾರಗಳು ಜನರ ಸಂಕಟ ನಿವಾರಣೆಗೆ ಸೂಕ್ತ ಕ್ರಮಕ್ಕೆ ಮುಂದಾಗಬೇಕು’ ಎಂದು ಒತ್ತಾಯಿಸಿದರು.

ರಾಯಚೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಅನುಸರಿಸಬೇಕಾದ ಕ್ರಮಗಳನ್ನು ಸರ್ಕಾರಕ್ಕೆ ತಲುಪಿಸಲು ಹೋರಾಟದ ಅವಶ್ಯಕತೆ ಇದೆ ಎಂದು ಅವರು ವಿವರಿಸಿದರು.

ರಾಜ್ಯ ಘಟಕದ ಸಹಕಾರ್ಯದರ್ಶಿ ಸಂತೋಷ ಪಕ್ಷದ ಸದಸ್ಯತ್ವದ ಹೆಚ್ಚಳ ಮತ್ತು ಪಕ್ಷದ ಸಿದ್ದಾಂತವನ್ನು ಜನಮಾನಸಕ್ಕೆ ಕೊಂಡೊಯ್ಯಬೇಕು ಎಂದು ಸಲಹೆ ನೀಡಿದರು.

ಪಕ್ಷದ ಜಿಲ್ಲಾ ಘಟಕದ ಕಾರ್ಯದರ್ಶಿ ಚಂದ್ರಶೇಖರ ಕ್ಯಾತ್ನಟ್ಟಿ, ಎಐಟಿಯುಸಿ ಮುಖಂಡರಾದ ವೆಂಕನಗೌಡ ಗದ್ರಟಗಿ, ಬಾಷುಮಿಯಾ, ಸಂಗಯ್ಯ ಜಗದೀಶ, ಕೊಪ್ಪಳ ಜಿಲ್ಲಾ ಘಟಕದ ಕಾರ್ಯದರ್ಶಿ ತಿಮ್ಮಣ್ಣ, ಕಿಸಾನ್ಸಬ ಮುಖಂಡ ಹುಲುಗಪ್ಪ, ಚನ್ನಮ್ಮ ಮಾನ್ವಿ ಉಪಸ್ಥಿತರಿದ್ದರು. ಲಕ್ಷ್ಮೀ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-32-820639114

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.