ಸಿಂಧನೂರು: ‘ನೀಟ್ ರದ್ದು ವಿರೋಧಿಸಿ, ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾದ ವತಿಯಿಂದ ಮೇ 19ರಂದು ಪ್ರತಿಭಟನೆ ನಡೆಸಲಾಗುವುದು’ ಎಂದು ಎಸ್.ಐ.ಒ ಜಿಲ್ಲಾ ಘಟಕದ ಅಧ್ಯಕ್ಷ ಇಮ್ತಿಯಾಜ್ ತಿಳಿಸಿದರು.

ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,‘ಪರೀಕ್ಷೆ ರದ್ದಾದ ಕಾರಣಕ್ಕೆ ವಿದ್ಯಾರ್ಥಿಗಳು ಮಾನಸಿಕ ಹಾಗೂ ಆರ್ಥಿಕ ಒತ್ತಡಕ್ಕೆ ಸಿಲುಕಿ ಖಿನ್ನತೆಗೆ ಒಳಗಾಗುತ್ತಿದ್ದಾರೆ’ ಎಂದು ಹೇಳಿದರು.

‘ರಾಜಸ್ಥಾನ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಒಟ್ಟು ನಾಲ್ವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೀಟ್ನಲ್ಲಿ ಸಂಘಟಿತ ಭ್ರಷ್ಟಾಚಾರ ನಡೆದಿದೆ’ ಎಂದು ಆರೋಪಿಸಿದರು. ‘ಪರೀಕ್ಷಾ ವ್ಯವಸ್ಥೆಯ ವಿಕೇಂದ್ರೀಕರಣ ಮತ್ತು ಏಜೆನ್ಸಿ ರಚನೆಯಲ್ಲಿ ಸಂಪೂರ್ಣ ಸುಧಾರಣೆ ತರಬೇಕು. ಪ್ರಶ್ನೆ ಪತ್ರಿಕೆ ಸೋರಿಕೆ ಜಾಲದಲ್ಲಿ ಭಾಗಿಯಾಗಿರುವ ಎಲ್ಲಾ ವ್ಯಕ್ತಿಗಳ ವಿರುದ್ದ ಪಾರದರ್ಶಕ, ಕಾಲಮಿತಿಯಲ್ಲಿ ತನಿಖೆಯಾಗಬೇಕು. ಅವರಿಗೆ ಕಠಿಣ ಶಿಕ್ಷೆಯಾಗಬೇಕು. ಕೇಂದ್ರ ಶಿಕ್ಷಣ ಸಚಿವರು ಸರಣಿ ವೈಫಲ್ಯದ ನೈತಿಕ ಹೊಣೆ ಹೊತ್ತು ತಕ್ಷಣ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು.

ತಾಲ್ಲೂಕು ಘಟಕದ ಅಧ್ಯಕ್ಷ ಅಫ್ಜಲ್ ಹುಸೇನ್, ಕಾರ್ಯದರ್ಶಿ ಅಮೀರ್ ಸೊಹೈಲ್, ಯಾಹ್ಯ ರಜ್ವಿ, ಹಮ್ದನ್ ಜಕಿ, ಮೊಹಮ್ಮದ್ ಸುಲ್ತಾನ್, ನೌಮಾನ್ ಫೈಸಲ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-32-500440631

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.