ಸಿಂಧನೂರು: ಒಡಿಶಾದ ಬುಡಕಟ್ಟು ಸಮುದಾಯದ ಜೀತು ಮುಂಡಾ ಅವರ ಮೇಲೆ ಸರ್ಕಾರಿ ಬ್ಯಾಂಕ್ ಅಧಿಕಾರಿಗಳ ಅಮಾನವೀಯ ವರ್ತನೆ ಖಂಡಿಸಿ, ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೊಳಪಡಿಸಿ, ತಪ್ಪಿತಸ್ಥ ಬ್ಯಾಂಕ್ ಅಧಿಕಾರಿಗಳನ್ನು ಹುದ್ದೆಯಿಂದ ವಜಾಗೊಳಿಸುವಂತೆ ಆಗ್ರಹಿಸಿ, ಶನಿವಾರ ಸಿಪಿಐ(ಎಂಎಲ್) ಲಿಬರೇಶನ್ ಪಕ್ಷದ ವತಿಯಿಂದ ತಹಶೀಲ್ದಾರ್ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ರವಾನಿಸಲಾಯಿತು.

‘ಮೃತಪಡುವುದಕ್ಕೂ ಮುನ್ನ ಸಹೋದರಿ ಕರ್ಳಾ ಮುಂಡಾ ಅವರು ಒಡಿಶಾ ಗ್ರಾಮೀಣ ಬ್ಯಾಂಕ್ನಲ್ಲಿ ಠೇವಣಿ ಇಟ್ಟಿದ್ದ ₹ 20 ಸಾವಿರ ಅನ್ನು ವಾಪಸ್ ನೀಡುವಂತೆ ಜೀತು ಮುಂಡಾ ಅವರು ಹತ್ತಾರು ಬಾರಿ ಬ್ಯಾಂಕ್ ಅಲೆದಾಡಿದರೂ ಬ್ಯಾಂಕ್ ಅಧಿಕಾರಿಗಳು ದಾಖಲೆ ನೀಡುವಂತೆ ಸತಾಯಿಸಿದ್ದಾರೆ. ರೋಸಿಹೋದ ಜೀತು ಮುಂಡಾ ಅವರು ಸಮಾಧಿ ಅಗೆದು ಕೊಳೆತ ಸ್ಥಿತಿಯಲ್ಲಿದ್ದ ಸೋದರಿಯ ಶವವನ್ನು ಚೀಲದಲ್ಲಿ ಕಟ್ಟಿಕೊಂಡು ಬ್ಯಾಂಕ್ಗೆ ಬಂದಿದ್ದಾರೆ. ಈ ಘಟನೆಗೆ ಬ್ಯಾಂಕ್ ಅಧಿಕಾರಿಗಳ ಅಮಾನವೀಯ ವರ್ತನೆಯೇ ಕಾರಣವಾಗಿದೆ’ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಸಿಪಿಐ(ಎಂಎಲ್) ಲಿಬರೇಶನ್ ತಾಲ್ಲೂಕು ಕಾರ್ಯದರ್ಶಿ ಬಸವರಾಜ ಬೆಳಗುರ್ಕಿ ಮಾತನಾಡಿ, ‘ಬ್ಯಾಂಕ್ಗಳಲ್ಲಿ ಬಡವರು, ಆದಿವಾಸಿಗಳು, ಶೋಷಿತ ಸಮುದಾಯಗಳಿಗೆ ಸಾಲ ನೀಡುವುದಿರಲಿ, ಠೇವಣಿಯಿಟ್ಟ ಹಣವನ್ನು ವಾಪಸ್ ನೀಡಲು ನೀಡಲು ಸತಾಯಿಸಲಾಗುತ್ತಿದೆ’ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ರಾಘವೇಂದ್ರ ಉಪ್ಪಳ, ಭಗತ್ಸಿಂಗ್ ಆಟೊ ಚಾಲಕರ ಸಂಘದ ಅಧ್ಯಕ್ಷ ಬಸವರಾಜ ಕೊಂಡೆ, ತುಸಳಪ್ಪ ದಡೇಸುಗೂರು, ಹನುಮಂತ ಟೈಲರ್, ರಾಮಣ್ಣ, ಮಂಜುನಾಥ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-32-1435695777

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.