ಚಂಡೀಗಢ: ಕಾಂಗ್ರೆಸ್ ನಾಯಕ ಹಾಗೂ ಗಾಯಕ ಸಿಧು ಮೂಸೆವಾಲಾ ಅವರ ಹತ್ಯೆಯು ಎರಡು ಗ್ಯಾಂಗ್‌ಗಳ ನಡುವಿನ ವೈಷಮ್ಯದಿಂದಾಗಿ ನಡೆದಿದೆ ಎಂದು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ವಿ.ಕೆ.ಭಾವರಾ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ‘ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಮತ್ತು ಲಕ್ಕಿ ಪಟಿಯಾಲಾ ಗ್ಯಾಂಗ್ ನಡುವೆ ವೈಷಮ್ಯವಿದೆ. ವಿಕ್ಕಿ ಮಿಧುಖೇರಾ ಹತ್ಯೆಗೆ ಪ್ರತೀಕಾರವಾಗಿ ಸಿಧು ಮೂಸೆವಾಲಾ ಹತ್ಯೆಯಾದಂತೆ ಕಾಣುತ್ತಿದೆ’ ಎಂದು ತಿಳಿಸಿದ್ದಾರೆ.

ಮೂಸೆವಾಲಾ ಹತ್ಯೆ ಹೊಣೆಯನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೊತ್ತುಕೊಂಡಿದೆ ಎಂದು ಭಾವರಾ ಮಾಹಿತಿ ನೀಡಿದ್ದಾರೆ. ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್‌ನ ಸಹಚರ, ಕೆನಡಾ ಮೂಲದ ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್ ಮೂಸೆವಾಲಾ ಹತ್ಯೆಯ ಹೊಣೆಯನ್ನು ಹೊತ್ತುಕೊಂಡಿದ್ದಾನೆ.

ಮೂಸೆವಾಲಾಗೆ ನೀಡಲಾಗಿದ್ದ ಭದ್ರತೆಯನ್ನು ಪಂಜಾಬ್ ಸರ್ಕಾರ ಶನಿವಾರ ಹಿಂಪಡೆದಿತ್ತು. ಇದಾದ 24 ಗಂಟೆಗಳಲ್ಲಿ ಅವರ ಹತ್ಯೆಯಾಗಿದ್ದು, ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡುತ್ತಿದೆ.

ಸಿಧು ಮೂಸೆವಾಲಾ ಹತ್ಯೆಗೆ ಸಿಎಂ ಭಗವಂತ್ ಮಾನ್ ಜವಾಬ್ದಾರರು: ಕಾಂಗ್ರೆಸ್ ಆಕ್ರೋಶ https://www.prajavani.net/india-news/punjab-sidhu-moose-wala-murder-congress-bhagwant-mann-partap-singh-bajwa-940866.html

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.