ಚಂಡಿಗಡ: ಕೇಂದ್ರದ ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳ ರದ್ಧತಿಗೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ಸಿಂಘು ಗಡಿಗೆ ಹೊಂದಿಕೊಂಡಿರುವ ಹರಿಯಾಣದ ಸೋನಿಪತ್ ಜಿಲ್ಲೆಯ ಕುಂಡ್ಲಿ ಎಂಬಲ್ಲಿ ಕೈ ಕತ್ತರಿಸಿರುವ ರೀತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹವೊಂದು ಶುಕ್ರವಾರ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ವ್ಯಕ್ತಿಯ ವಯಸ್ಸು ಸುಮಾರು 35 ವರ್ಷ. ಸಿಂಘು ಗಡಿಗೆ ಹತ್ತಿರುವಿರುವ ಪ್ರದೇಶದಲ್ಲಿ ತಂತಿಗಳಿಂದ ನಿರ್ಮಿಸಿರುವ ತಡೆಗೋಡೆಗೆ ಬಿಗಿದಿರುವ ರೀತಿಯಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ‘ಮೃತ ವ್ಯಕ್ತಿ ಚಡ್ಡಿ (ಶಾರ್ಟ್ಸ್) ಧರಿಸಿದ್ದಾರೆ‘ ಎಂದು ಅವರು ಹೇಳಿದರು.

ಓದಿ:ಲಖಿಂಪುರ ಘಟನೆಯ ಮರುಸೃಷ್ಟಿ: ಆಶಿಶ್ ಮಿಶ್ರಾರನ್ನು ಸ್ಥಳಕ್ಕೆ ಕರೆದೊಯ್ದ ಪೊಲೀಸರು

‘ರೈತರ ಪ್ರತಿಭಟನಾ ಸ್ಥಳದ ಬಳಿ ಅಪರಿಚಿತ ಶವವೊಂದು ಪತ್ತೆಯಾಗಿರುವುದಾಗಿ ಬೆಳಿಗ್ಗೆ 5 ಗಂಟೆ ಸುಮಾರಿಗೆ ಕುಂಡ್ಲಿ ಪೊಲೀಸ್ ಠಾಣೆಗೆ ಮಾಹಿತಿ ಸಿಕ್ಕಿತ್ತು‘ ಎಂದು ಸೋನಿಪತ್ ನಗರದ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರೋಹ್ಟಕ್ ವಲಯದ ಐಜಿಪಿ ಸಂದೀಪ್ ಖಿರ್ವಾರ್, ‘ನಾವು ಪ್ರಕರಣ ದಾಖಲಿಸಿಕೊಂಡಿದ್ದೇವೆ. ಅಪರಾಧಿಗಳ ಪತ್ತೆಗಾಗಿ ಹೆಚ್ಚಿನ ತನಿಖೆ ನಡೆಯುತ್ತಿದೆ‘ ಎಂದು ದೂರವಾಣಿ ಮೂಲಕ ಸುದ್ದಿಸಂಸ್ಥೆಗೆ ತಿಳಿಸಿದರು. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರತಿಭಟನಾ ಸ್ಥಳದ ಸಮೀಪವಿದ್ದ ಜನರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಅವರು ಹೇಳಿದರು.

ಅಪರಿಚಿತ ವ್ಯಕ್ತಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದ ವಿಡಿಯೊ ದೃಶ್ಯದ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅದರಲ್ಲಿ ರೈತರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಕುರಿತು ಕೇಳಿದ ಪ್ರಶ್ನೆಗೆ ಪೊಲೀಸರು ‘ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ‘ ಎಂದು ಹೇಳಿದರು.

ಓದಿ:ರೈತರ ಪರ ವಾಜಪೇಯಿ ಭಾಷಣ: ಹಳೆಯ ವಿಡಿಯೊ ಹಂಚಿಕೊಂಡ ಬಿಜೆಪಿ ಮುಖಂಡ ವರುಣ್ ಗಾಂಧಿ

ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೋನಿಪತ್ ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.