ಕೋಲ್ಕತ್ತ, ಪಶ್ಚಿಮ ಬಂಗಾಳ: 64 ವರ್ಷದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಪಶ್ಚಿಮ ಬಂಗಾಳದ ಉತ್ತರ ದಿನಜ್ಪುರ ಜಿಲ್ಲೆಯಲ್ಲಿ ಗುರುವಾರ ನಡೆದಿದೆ. ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಗೆ (ಎಸ್ಐಆರ್) ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿ ಈ ರೀತಿ ಮಾಡಿಕೊಂಡಿದ್ದಾರೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಇಲ್ಲಿನ ರಾಯ್ಗಂಗ್ ಪೊಲೀಸ್ ಠಾಣಾ ವ್ಯಾಪ್ತಿಯ ಪಲ್ಪರಾ ಪ್ರದೇಶದ ನಿವಾಸಿ ಬಬ್ಲು ಪಾಲ್ ಮೃತಪಟ್ಟವರು.

‘ಪಾಲ್ ಅವರು ಗುರುವಾರ ಬೆಳಿಗ್ಗೆ ತಮ್ಮ ಮನೆಯಲ್ಲಿ ನೇಣು ಹಾಕಿಕೊಂಡರು. ಮಾಹಿತಿ ಸಿಗುತ್ತಿದ್ದಂತೆಯೇ, ತಕ್ಷಣವೇ ಅವರ ಮನೆಗೆ ಧಾವಿಸಿದ ಅಧಿಕಾರಿಗಳು ಮೃತದೇಹವನ್ನು ಕೆಳಗಿಳಿಸಿ, ಮರಣೋತ್ತರ ಪರೀಕ್ಷೆಗಾಗಿ ರಾಯ್ಗಂಜ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಗೆ ಕಳುಹಿಸಿದ್ದರು. ತನಿಖೆ ಮುಂದುವರಿದಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎರಡನೇ ಹಂತದ ಎಸ್ಐಆರ್ ಆರಂಭಗೊಂಡ ಬಳಿಕ ಪಾಲ್ ತೀವ್ರ ಮಾನಸಿಕ ಒತ್ತಡದಲ್ಲಿದ್ದರು. ಮತದಾರರ ಪಟ್ಟಿಯಿಂದ ನನ್ನ ಹೆಸರನ್ನು ಅಳಿಸಿಹಾಕಿ, ಅಕ್ರಮ ವಲಸಿಗ ಎಂದು ಘೋಷಿಸಬಹುದು ಎಂದು ಅವರು ಸ್ವತಃ ಆತಂಕಗೊಂಡಿದ್ದರು ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಮೃತರ ಕೋಣೆಯಿಂದ ಮರಣಪತ್ರ ಸ್ವೀಕರಿಸಲಾಗಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರು ಖಚಿತಪಡಿಸಿಲ್ಲ.

ಗುಜರಿ ವ್ಯಾಪಾರ ನಡೆಸುತ್ತಿದ್ದ ಪಾಲ್ ಅವರಿಗೆ ಪತ್ನಿ ಹಾಗೂ ಮಗಳು ಇದ್ದಾರೆ.

ಸ್ಥಳೀಯ ತೃಣಮೂಲ ಕಾಂಗ್ರೆಸ್ ಶಾಸಕ ಕೃಷ್ಣ ಕಲ್ಯಾಣಿ ಅವರು ಪಾಲ್ ಅವರ ಮನೆಗೆ ತೆರಳಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.