ಕಾಲಮಿತಿ ನಿಗದಿಗೆ ಆಗ್ರಹ: ಸಭಾತ್ಯಾಗ
ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ಕಾಲಮಿತಿಯಲ್ಲಿ ಚರ್ಚೆ ನಡೆಸಬೇಕೆಂಬ ವಿಚಾರವಾಗಿ ಸರ್ಕಾರ ಮತ್ತು ವಿರೋಧ ಪಕ್ಷಗಳ ಮಧ್ಯೆ ರಾಜ್ಯಸಭೆಯಲ್ಲಿ ಮಂಗಳವಾರವೂ ಜಟಾಪಟಿ ಮುಂದುವರಿಯಿತು. ಆದ್ಯತೆಯ ಮೇರೆಗೆ ಎಸ್‌ಐಆರ್ ಕುರಿತು ಚರ್ಚೆ ನಡೆಸಬೇಕು ಎಂದು ವಿಪಕ್ಷಗಳ ನಾಯಕರು ಆಗ್ರಹಿಸಿದರು. ಆದರೆ ‘ವಂದೇ ಮಾತರಂ’ ಕುರಿತು ಮೊದಲು ಚರ್ಚೆ ನಡೆಸಬೇಕು ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಒತ್ತಿ ಹೇಳಿದರು. ಎಸ್‌ಐಆರ್ ಕುರಿತ ಚರ್ಚೆಗೆ ಸರ್ಕಾರ ನಿರಾಕರಿಸುತ್ತಿದ್ದಂತೆಯೇ ವಿಪಕ್ಷಗಳ ಸಂಸದರು ಘೋಷಣೆಗಳನ್ನು ಕೂಗಿ, ಸಭಾತ್ಯಾಗ ಮಾಡಿದರು. ಮಧ್ಯಾಹ್ನ 2 ಗಂಟೆಯ ಬಳಿಕ ಮತ್ತೆ ಕಲಾಪ ಆರಂಭವಾದಾಗಲೂ ಇದೇ ವಿಚಾರವಾಗಿ ವಾಗ್ವಾದ ನಡೆಯಿತು. ಮತ್ತೆ ವಿಪಕ್ಷಗಳ ಸದಸ್ಯರು ಸಭಾತ್ಯಾಗ ಮಾಡಿದರು.