ನವದೆಹಲಿ: ದೆಹಲಿ ಸರ್ಕಾರದ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಅಬಕಾರಿ ನೀತಿ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ಸಿಬಿಐ ವಿಚಾರಣೆ ಎದುರಿಸುತ್ತಿದ್ದಾರೆ.

ಸಿಬಿಐ ತನಿಖೆಗೆ ಪೂರ್ಣ ಸಹಕಾರ ನೀಡುತ್ತೇನೆ. ನನ್ನ ಮೇಲಿನ ಸುಳ್ಳು ಆರೋಪದಲ್ಲಿ ಜೈಲಿಗೆ ಹೋದರೂ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಸಿಸೋಡಿಯಾ ಹೇಳಿದ್ದಾರೆ. ಸಿಬಿಐ ಕಚೇರಿಗೆ ವಿಚಾರಣೆಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಈ ಪ್ರಕರಣದಲ್ಲಿ ನನ್ನ ಕುಟುಂಬ ನನ್ನ ಪರವಾಗಿದೆ. ಪತ್ರಕರ್ತ ವೃತ್ತಿಗೆ ವಿದಾಯ ಹೇಳಿದ ಸಂದರ್ಭದಲ್ಲಿ ನನ್ನ ಪತ್ನಿ ಬೆನ್ನಿಗೆ ನಿಂತಿದ್ದರು, ಹಾಗೆ ಈಗಲೂ ಜತೆಗಿದ್ದಾರೆ. ನನ್ನ ಕುಟುಂಬವನ್ನು ನಮ್ಮ ಪಕ್ಷದ ಕಾರ್ಯಕರ್ತರು ನೋಡಿಕೊಳ್ಳುತ್ತಾರೆ. ನಾನು ಎಷ್ಟು ಸಲ ಬೇಕಾದರೂ ಜೈಲಿಗೆ ಹೋಗಬಲ್ಲೆ’ ಎಂದು ಸಿಸೋಡಿಯಾ ಆಕ್ರೋಶ ವ್ಯಕ್ತಪಡಿಸಿದರು.

ದೆಹಲಿ ಬಜೆಟ್ ಸಿದ್ಧತೆಯ ಕಾರಣ ನೀಡಿ ಕಳೆದ ಭಾನುವಾರ ಹಾಜರಾಗದ ಸಿಸೋಡಿಯಾ ಇಂದು ಸಿಬಿಐ ವಿಚಾರಣೆಗೆ ಹಾಜರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.