ಲಖಿಂಪುರ-ಖೇರಿ: ಉತ್ತರ ಪ್ರದೇಶದ ಲಖಿಂಪುರ-ಖೇರಿ ಹಿಂಸಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಇಟಿ) ಸೋಮವಾರ ಸುಮಾರು 5,000 ಪುಟಗಳ ಚಾರ್ಜ್ ಶೀಟ್ ಅನ್ನು ಸ್ಥಳೀಯ ನ್ಯಾಯಾಲಯಕ್ಕೆ ಸಲ್ಲಿಸಿದೆ.

ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಪ್ರಕರಣದಲ್ಲಿ ಪ್ರಧಾನ ಆರೋಪಿ ಎಂದು ಉಲ್ಲೇಖಿಸಲಾಗಿದೆ.

ಇದನ್ನೂ ಓದಿ:ಜಮ್ಮು-ಕಾಶ್ಮೀರ: ಪಾಕಿಸ್ತಾನದ ನುಸುಳುಕೋರನನ್ನು ಹೊಡೆದುರುಳಿಸಿದ ಬಿಎಸ್ಎಫ್

2021 ಅಕ್ಟೋಬರ್ 3ರಂದು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ರೈತರ ಮೇಲೆ ಕಾರು ಚಲಾಯಿಸಲಾಗಿತ್ತು. ಬಳಿಕ ಹಿಂಸಾಚಾರ ನಡೆದಿತ್ತು.

ಅಂದು ನಡೆದ ಹಿಂಸಾಚಾರದಲ್ಲಿ ಒಬ್ಬ ಪತ್ರಕರ್ತ ಸೇರಿ ಒಟ್ಟು ಎಂಟು ಮಂದಿ ಸಾವಿಗೀಡಾಗಿದ್ದರು. ಇದರಲ್ಲಿ ನಾಲ್ವರು ರೈತರು, ಓರ್ವ ಪತ್ರಕರ್ತ, ಇಬ್ಬರು ಬಿಜೆಪಿ ಕಾರ್ಯಕರ್ತರು ಮತ್ತು ಒಬ್ಬ ಚಾಲಕ ಸೇರಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆಶಿಶ್ ಮಿಶ್ರಾ ಅವರನ್ನು ಈಗಾಗಲೇ ಬಂಧಿಸಲಾಗಿದೆ.

ಪ್ರಕರಣದಲ್ಲಿ ವೀರೇಂದ್ರ ಶುಕ್ಲಾ ಎಂಬ ಮತ್ತೊಬ್ಬ ವ್ಯಕ್ತಿಯನ್ನು ಆರೋಪಪಟ್ಟಿಯಲ್ಲಿ ಸೇರಿಸಲಾಗಿದೆ. ಈ ಮೂಲಕ ಪ್ರಕರಣದಲ್ಲಿ ಆರೋಪಿಗಳ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಅವರ ವಿರುದ್ಧ ಐಪಿಸಿ ಸೆಕ್ಷನ್ 201ರ ಅಡಿಯಲ್ಲಿ ಆರೋಪ ಹೊರಿಸಲಾಗಿದೆ ಎಂದು ಪ್ರಾಸಿಕ್ಯೂಷನ್ ವಕೀಲರು ತಿಳಿಸಿದ್ದಾರೆ.

ರೈತರ ಮೇಲೆ ಕಾರು ಚಲಾಯಿಸಿರುವ ಮೂರು ಎಸ್‌ಯುವಿಗಳ ಚಾಲಕರು ಸೇರಿದಂತೆ ಆರೋಪಿಗಳನ್ನು ಲಖಿಂಪುರ ಖೇರಿ ಜೈಲಿನಲ್ಲಿರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.