ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಗಂಭೀರ ಗಂಟಲು ಸೋಂಕು: ಸೀತಾರಾಂ ಯೆಚೂರಿಗೆ ಏಮ್ಸ್‌ನಲ್ಲಿ ಚಿಕಿತ್ಸೆ

Published 6 ಸೆಪ್ಟೆಂಬರ್ 2024, 6:16 IST
Last Updated 6 ಸೆಪ್ಟೆಂಬರ್ 2024, 6:16 IST
ಅಕ್ಷರ ಗಾತ್ರ

ನವದೆಹಲಿ: ಗಂಟಲು ಸೋಂಕಿಗೆ ದೆಹಲಿಯ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಭಾರತೀಯ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್‌ವಾದ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಸಕಾರಾತ್ಮಕವಾಗಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಪಕ್ಷ ಶುಕ್ರವಾರ ಮಾಹಿತಿ ನೀಡಿದೆ.

‘ಯೆಚೂರಿಯವರು ಏಮ್ಸ್‌ನ ತುರ್ತು ನಿಗಾ ಘಟಕದಲ್ಲಿ ಇದ್ದು, ಅವರು ಗಂಭೀರ ಗಂಟಲು ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಸಿಪಿಐ(ಎಂ) ಹೇಳಿದೆ.

‘ಚಿಕಿತ್ಸೆಗೆ ಅವರು ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ. ಕಾಮ್ರೇಡ್ ಯೆಚೂರಿಯವರ ಆರೋಗ್ಯ ಸ್ಥಿರವಾಗಿದೆ’ ಎಂದು ಪಕ್ಷ ಮಾಹಿತಿ ನೀಡಿದೆ.

72 ವರ್ಷದ ಯೆಚೂರಿ, ಆಗಸ್ಟ್ 19ರಂದು ಎದೆಯಲ್ಲಿ ನ್ಯುಮೋನಿಯಾ ಮಾದರಿಯ ಸೋಂಕಿಗೆ ತುತ್ತಾಗಿ ಏಮ್ಸ್‌ಗೆ ದಾಖಲಾಗಿದ್ದರು. ಅವರ ಅನಾರೋಗ್ಯದ ನಿಖರ ಸ್ವರೂಪವನ್ನು ಆಸ್ಪತ್ರೆ ಬಹಿರಂಗಪಡಿಸಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT