ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪುಣೆ ಬಳಿ ಮೇಣದ ಬತ್ತಿ ತಯಾರಿಕಾ ಘಟಕದಲ್ಲಿ ಅಗ್ನಿ ಅವಘಡ: 6 ಕಾರ್ಮಿಕರ ಸಾವು

Published 8 ಡಿಸೆಂಬರ್ 2023, 12:24 IST
Last Updated 8 ಡಿಸೆಂಬರ್ 2023, 12:24 IST
ಅಕ್ಷರ ಗಾತ್ರ

ಪುಣೆ(ಮಹಾರಾಷ್ಟ್ರ): ಪುಣೆ ಜಿಲ್ಲೆಯ ಪಿಂಪ್ರಿ–ಚಿಂಚ್‌ವಾಡ್ ಪ್ರದೇಶದಲ್ಲಿರುವ ಮೇಣದ ಬತ್ತಿ ತಯಾರಿಕಾ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ 6 ಕಾರ್ಮಿಕರು ಮೃತಪಟ್ಟಿದ್ದು, 8 ಮಂದಿ ಗಾಯಗೊಂಡಿದ್ದಾರೆ.

‘ಇಂದು(ಶುಕ್ರವಾರ) ಮಧ್ಯಾಹ್ನ 2.45 ರ ಸುಮಾರಿಗೆ ತಲವಾಡೆಯಲ್ಲಿರುವ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿರುವ ಬಗ್ಗೆ ಅಗ್ನಿಶಾಮಕ ದಳಕ್ಕೆ ಮಾಹಿತಿ ಬಂದಿದೆ' ಎಂದು ಪಿಂಪ್ರಿ-ಚಿಂಚ್‌ವಡ ಪುರಸಭೆಯ ಆಯುಕ್ತ ಶೇಖರ್ ಸಿಂಗ್ ತಿಳಿಸಿದ್ದಾರೆ.

ಕಾರ್ಖಾನೆಯಲ್ಲಿ ಹುಟ್ಟುಹಬ್ಬದ ಆಚರಣೆಗೆ ಬಳಸಲಾಗುವ ಮೇಣದ ಬತ್ತಿಗಳನ್ನು ತಯಾರಿಸಲಾಗುತ್ತದೆ. ಸದ್ಯ ಬೆಂಕಿಯನ್ನು ಹತೋಟಿಗೆ ತರಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಗಾಯಾಳುಗಳನ್ನು ಪುಣೆ ಮತ್ತು ಪಿಂಪ್ರಿ–ಚಿಂಚ್‌ವಾಡ್ ಮುನ್ಸಿಪಲ್ ಕಾರ್ಪೊರೇಷನ್ ಪ್ರದೇಶದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಸಿಂಗ್ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT