ಫರಿದಾಬಾದ್(ಹರಿಯಾಣ): ವೇಗವಾಗಿ ಚಲಿಸುತ್ತಿದ್ದ ಟ್ರಕ್, ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಮೃತಪಟ್ಟಿರುವ ಗಟನೆ ಫರಿದಾಬಾದ್–ಗುರುಗ್ರಾಮ ರಸ್ತೆಯಲ್ಲಿ ನಡೆದಿದೆ.

ಮಂಗರ್ ಪೊಲೀಸ್ ಠಾಣಾ ಪೋಸ್ಟ್ ಬಳಿ ಗುರುವಾರ ತಡರಾತ್ರಿ ಅಪಘಾತ ಸಂಭವಿಸಿದೆ.

ಮೃತರೆಲ್ಲರೂ ಪಲವಲ್ ನಗರದವರಾಗಿದ್ದು, ಮಾರುತಿ ಆಲ್ಟೊ ಕಾರಿನಲ್ಲಿ ಗುರುಗ್ರಾಮದಿಂದ ಫರಿದಾಬಾದ್ಗೆ ತೆರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. 6 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಮೃತದೇಹಗಳನ್ನು ಬಿ.ಕೆ. ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರನ್ನು ಪುತಿನ್, ಜತಿನ್, ಆಕಾಶ್, ಸಂದೀಪ್, ಬಲ್ಜೀತ್ ಮತ್ತು ವಿಸಾಲ್ ಎಂದು ಗುರುತಿಸಲಾಗಿದೆ. ಮೃತರೆಲ್ಲರೂ 18–25 ವರ್ಷ ವಯಸ್ಸಿನವರಾಗಿದ್ದಾರೆ.

ಟ್ರಕ್ ಚಾಲಕ ಪರಾರಿಯಾಗಿದ್ದು, ಆತನ ಹುಡುಕಾಟದಲ್ಲಿ ಪೊಲೀಸರು ತೊಡಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.