ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಗಾಲ್ಯಾಂಡ್‌ನ ಕಲ್ಲಿದ್ದಲು ಗಣಿಯಲ್ಲಿ ಅಗ್ನಿ ಅವಘಡ: 6 ಮಂದಿ ಸಾವು

Published 26 ಜನವರಿ 2024, 13:13 IST
Last Updated 26 ಜನವರಿ 2024, 13:13 IST
ಅಕ್ಷರ ಗಾತ್ರ

ಕೊಹಿಮಾ: ನಾಗಾಲ್ಯಾಂಡ್‌ನಲ್ಲಿ ಕಾನೂನುಬಾಹಿರವಾಗಿ ನಡೆಸಲಾಗುತ್ತಿದ್ದ ಕಲ್ಲಿದ್ದಲು ಗಣಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ದುರ್ಘಟನೆಯಲ್ಲಿ 6 ಮಂದಿ ಸಜೀವ ದಹನವಾಗಿದ್ದು, 4 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ವೊಖಾ ಜಿಲ್ಲೆಯ ಭಂಡಾರಿ ಉಪ ವಿಭಾಗದ ರಿಚನ್ಯಾನ್ ಹಳ್ಳಿಯಲ್ಲಿ ಈ ಅವಘಡ ಸಂಭವಿಸಿದೆ ಎಂದು ಭಂಡಾರಿ ಕ್ಷೇತ್ರದ ಶಾಸಕ ಅಚುಂಬೆಮೊ ಕಿಕೊನ್ ಹೇಳಿದ್ದಾರೆ.

ಮೃತರೆಲ್ಲರೂ ಅಸ್ಸಾಂ ಮೂಲದವರಾಗಿದ್ದು, ಅಕ್ರಮವಾಗಿ ರ್‍ಯಾಟ್ ಹೋಲ್ ಮೈನಿಂಗ್ ನಡೆಸುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ ಎಂದು ಅವರು ತಿಳಿಸಿದ್ದಾರೆ.

ಮೃತರನ್ನು ದಿಮಪುರ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಕ್ರಮ ಕಲ್ಲಿದ್ದಲು ಗಣಿ ಬಗ್ಗೆ ಕಳವಳ ವ್ಯಕ್ತಪಡಿಸಿದ ಶಾಸಕ ಭಂಡಾರಿ, ಅಂತಹ ಗಣಿಗಾರಿಕೆಯನ್ನು ತಡೆಯಲು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ರಾಜ್ಯದ ಗಣಿ ಇಲಾಖೆಯನ್ನು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT