ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಛತ್ತೀಸಗಢ | ಕಾರ್ಖಾನೆಯಲ್ಲಿ ಸ್ಫೋಟ: ವ್ಯಕ್ತಿ ಸಾವು, ಆರು ಮಂದಿಗೆ ಗಾಯ

Published 25 ಮೇ 2024, 6:46 IST
Last Updated 25 ಮೇ 2024, 6:46 IST
ಅಕ್ಷರ ಗಾತ್ರ

ಬೆಮೆತರಾ: ಛತ್ತೀಸಗಢದ ಬೆಮೆತರಾ ಜಿಲ್ಲೆಯ ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯ ಬೆರ್ಲಾ ಡೆವಲಪ್‌ಮೆಂಟ್‌ ಬ್ಲಾಕ್‌ನ ಪಿರ್ದಾ ಗ್ರಾಮದ ಬಳಿ ಇರುವ ಘಟಕದಲ್ಲಿ ಸ್ಫೋಟ ಸಂಭವಿಸಿದೆ. ಕೂಡಲೇ ಎಚ್ಚೆತ್ತ ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ. ಇದುವರೆಗೆ, ಸ್ಫೋಟದಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಜಿಲ್ಲಾಡಳಿತದ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಗುರುವಾರ (ಮೇ 23) ರಾಸಾಯನಿಕ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 9 ಮಂದಿ ಮೃತಪಟ್ಟಿದ್ದರು ಮತ್ತು 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ಘಟನೆಯ ಬೆನ್ನಲ್ಲೇ ಇದೀಗ ಛತ್ತೀಸಗಢದಲ್ಲಿ ಈ ಸ್ಫೋಟ ಸಂಭವಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT