ಸೋಮವಾರ, 3 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರಪ್ರದೇಶ: ಕಲ್ಲು ತೂರಾಟದಲ್ಲಿ ಆರು ಮಂದಿಗೆ ಗಾಯ

Last Updated 14 ಡಿಸೆಂಬರ್ 2020, 8:22 IST
ಅಕ್ಷರ ಗಾತ್ರ

ಮುಜಾಫ್ಫರ್‌ನಗರ (ಉತ್ತರ ಪ್ರದೇಶ): ಜಿಲ್ಲೆಯ ಚಾಲ್ಸಿನಾ ಗ್ರಾಮದಲ್ಲಿ 18 ವರ್ಷದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ವಿಷಯಕ್ಕೆ ಸಂಬಂಧಿಸಿದಂತೆ ಎರಡು ಬಣಗಳ ನಡುವೆ ಘರ್ಷಣೆ ನಡೆದಿದೆ. ಈ ವೇಳೆ ನಡೆದ ಕಲ್ಲು ತೂರಾಟದಲ್ಲಿ ಆರು ಮಂದಿಗೆ ಗಾಯಗಳಾಗಿವೆ ಎಂದು ಪೊಲೀಸರು ಸೋಮವಾರ ತಿಳಿಸಿದರು.

ಭಾನುವಾರ ಸಂಜೆ ಯುವತಿ ತನ್ನ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಈ ವೇಳೆ ಕೊಠಡಿಯಲ್ಲಿ ಆಕೆಯ ಪೋಷಕರು ಉ‍ಪಸ್ಥಿತರಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಕೂಡಲೇ ಸಂತ್ರಸ್ತೆ ಕುಟುಂಬದವರು ಮಗಳ ರಕ್ಷಣೆಗೆ ಮುಂದಾಗಿದ್ದಾರೆ. ಇದರಿಂದ ಗ್ರಾಮದ ಎರಡು ಬಣಗಳ ನಡುವೆ ಘರ್ಷಣೆ ನಡೆದಿದೆ. ತಕ್ಷಣವೇ ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

‘ಕಲ್ಲು ತೂರಾಟದಲ್ಲಿ ಭಾಗಿಯಾಗಿದ್ದ 30 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 14 ಮಂದಿಯ ವಿರುದ್ಧ ಐಪಿಸಿಯ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಲಾಗಿದ್ದು, ಅವರಲ್ಲಿ ಕೆಲವರನ್ನು ಬಂಧಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಗ್ರಾಮದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ’ ಎಂದು ಪೊಲೀಸರ್ ಅಧಿಕಾರಿ ತಿಳಿಸಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT