ಬುಧವಾರ, 11 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಹಾರ: ಸಿಡಿಲು ಬಡಿದು 6 ಸಾವು

Published 7 ಆಗಸ್ಟ್ 2024, 15:59 IST
Last Updated 7 ಆಗಸ್ಟ್ 2024, 15:59 IST
ಅಕ್ಷರ ಗಾತ್ರ

ಪಟ್ನಾ: ಬಿಹಾರದ ನವಾದಾ ಜಿಲ್ಲೆಯಲ್ಲಿ ಬುಧವಾರ ಸಿಡಿಲು ಬಡಿದು 6 ಜನರು ಮೃತಪಟ್ಟಿದ್ದಾರೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಮುಖ್ಯಮಂತ್ರಿ ಕಚೇರಿಯಿಂದ ಹೊರಡಿಸಿದ ಹೇಳಿಕೆಯಲ್ಲಿ, ಘಟನೆಯು ಔರೈಯಾ, ಪಕ್ರಿಬರವಾ, ಕದಿರ್‌ಗಂಜ್ ಮತ್ತು ರೋಹ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ ಎಂದು ತಿಳಿಸಿದೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಮೃತರ ಕುಟುಂಬಕ್ಕೆ ₹4 ಲಕ್ಷ ಪರಿಹಾರ ಘೋಷಿಸಿದ್ದಾರೆ.

ವಿಪತ್ತು ನಿರ್ವಹಣಾ ಇಲಾಖೆ ನೀಡುವ ಸಲಹೆಗಳನ್ನು ಪಾಲಿಸುವಂತೆ ಕುಮಾರ್ ಜನರಿಗೆ ಮನವಿ ಮಾಡಿದರು ಎಂದು ಪ್ರಕಟಣೆಯಲ್ಲಿ ಸೇರಿಸಲಾಗಿದೆ.

ಆಗಸ್ಟ್ 1ರಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಿಡಿಲು ಬಡಿದು ಈವರೆಗೆ 26ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT