ನವದೆಹಲಿ : ದೆಹಲಿ ಹೊರವಲಯದ ಕಿರಾರಿ ಪ್ರದೇಶದಲ್ಲಿ ಮೂರು ಅಂತಸ್ತಿನ ವಸತಿ ಮತ್ತು ವಾಣಿಜ್ಯ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಆರು ತಿಂಗಳಿನ ಮಗು ಸಹಿತ ಮೂವರು ಮಕ್ಕಳು ಸೇರಿದಂತೆ 9 ಮಂದಿ ಮೃತಪಟ್ಟಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ದಳದ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಭಾನುವಾರ ಮಧ್ಯರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ದಳದ ಎಂಟು ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿವೆ. ಬೆಳಗಿನ ಜಾವ 3.50ಕ್ಕೆ ಬೆಂಕಿ ಹತೋಟಿಗೆ ಬಂದಿದೆ. ಈ ಕಟ್ಟಡದ ನೆಲಮಾಳಿಗೆಯ ಗೋಡಾವನದಲ್ಲಿದ್ದ ₹20 ಲಕ್ಷ ಮೌಲ್ಯದ ಬಟ್ಟೆಗಳು ಸುಟ್ಟು ಭಸ್ಮವಾಗಿವೆ. ಕಟ್ಟಡದಲ್ಲಿ ಬೆಂಕಿ ನಂದಿಸಲು ಯಾವುದೇಸುರಕ್ಷತಾ ಸಾಧನಗಳಿರಲಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕಟ್ಟಡದ ಮಾಲೀಕ ರಾಮ್ ಚಂದ್ರ ಝಾ (65), ಸುದರಿಯಾ ದೇವಿ (58), ಸಂಜು ಝಾ (36), ಗುಡ್ಡನ್, ಉದಯ ಚೌಧರಿ (33) ಹಾಗೂ ಅವರ ಪತ್ನಿ ಮುಸ್ಕಾನ್ (26), ಅವರ ಮಕ್ಕಳಾದ ಅಂಜಲಿ (10), ಆದರ್ಶ (7) ಹಾಗೂ ಆರು ತಿಂಗಳಿನ ಮಗು ತುಳಸಿ ಮೃತಪಟ್ಟವರು.

ಈ ಅವಘಡದಲ್ಲಿ ಮೂವರನ್ನು ರಕ್ಷಿಸಲಾಗಿದೆ. ಪೂಜಾ (24) ಅವರ ಪುತ್ರಿಯರಾದ ಸೌಮ್ಯಾ (10) ಹಾಗೂ ಮೂರು ವರ್ಷದ ಆರಾಧ್ಯ ಅವರು ಪಕ್ಕದ ಕಟ್ಟಡಕ್ಕೆ ಜಿಗಿದಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದೇ ತಿಂಗಳು ದೆಹಲಿಯ ಅನಾಜ್ ಮಂಡಿಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 43 ಮಂದಿ ಮೃತಪಟ್ಟಿದ್ದ ಘಟನೆ ಮಾಸುವ ಮುನ್ನವೇ ಮತ್ತೊಂದು ಅವಘಡ ನಡೆದಿದೆ.

ಶಾರ್ಟ್ ಸರ್ಕಿಟ್‌ನಿಂದ ಬೆಂಕಿ ಹತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಆದರೆ, ತನಿಖೆಯಿಂದ ನಿಖರವಾದ ಕಾರಣ ಗೊತ್ತಾಗಲಿದೆ. ಎರಡನೇ ಮಹಡಿಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ಕಟ್ಟಡಕ್ಕೆ ಹಾನಿಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.