ಚಾಯಿಬಾಸಾ (ಜಾರ್ಖಂಡ್): ಪಶ್ಚಿಮ ಸಿಂಘ್ಭೂಮ್ ಜಿಲ್ಲೆಯಲ್ಲಿ ಭದ್ರತಾ ಪಡೆ ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ನಕ್ಸಲ್ ಹತನಾಗಿದ್ದಾನೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ತೆಬೊ ಪೊಲೀಸ್ ಠಾಣಾ ವ್ಯಾಪ್ತಿಯ ತೊಮ್ರೊಮ್ ಗ್ರಾಮದಲ್ಲಿ ಎನ್ಕೌಂಟರ್ ನಡೆದಿದೆ.

ಪೀಪಲ್ಸ್ ಲಿಬರೇಷನ್ ಫ್ರಂಟ್ ಆಫ್ ಇಂಡಿಯಾ (ಪಿಎಲ್ಎಫ್ಐ) ಸದಸ್ಯರ ಇರುವಿಕೆ ಬಗ್ಗೆ ಸ್ಪಷ್ಟ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಲಾಗಿತ್ತು.

ಮೃತನನ್ನು ಪಿಎಲ್ಎಫ್ಐನ ಏರಿಯಾ ಕಮಾಂಡರ್ ರಾದುಂಗ್ ಬೊದ್ರಾ ಅಲಿಯಾಸ್ ಲಾಂಬೂ ಎಂದು ಗುರುತಿಸಲಾಗಿದೆ. ಸ್ಥಳದಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

29 ಪ್ರಕರಣಗಳಲ್ಲಿ ಈತ ಬೇಕಾಗಿದ್ದ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಛತ್ತೀಸಗಢ: ಆರು ನಕ್ಸಲರ ಬಂಧನ...

ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಇಂದು ನಡೆಸಿದ ಕಾರ್ಯಾಚರಣೆಯಲ್ಲಿ ಆರು ನಕ್ಸಲರನ್ನು ಬಂಧಿಸಲಾಗಿದೆ.

ಸಿಆರ್ಪಿಎಫ್ 196ನೇ ಬೆಟಾಲಿಯನ್, ಸಿಆರ್ಪಿಎಫ್ನ ಕೋಬ್ರಾ ಪಡೆ ಹಾಗೂ ಸ್ಥಳೀಯ ಪೊಲೀಸರು ಅರಣ್ಯ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆಯನ್ನು ನಡೆಸಿದ್ದರು. ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
.ಉಡುಪಿ: ನಕ್ಸಲ್ ಎನ್ಕೌಂಟರ್ ನಡೆದ ಸ್ಥಳಕ್ಕೆ ಐಎಸ್ಡಿ ಐಜಿಪಿ ಡಿ. ರೂಪಾ ಭೇಟಿ.ಉಡುಪಿಯ ಕಬ್ಬಿನಾಲೆಯಲ್ಲಿ ANF ಎನ್ಕೌಂಟರ್: ನಕ್ಸಲ್ ನಾಯಕ ವಿಕ್ರಮ್ ಗೌಡ ಹತ್ಯೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.