ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಡೆ ಕುಸಿತ: ಇಟ್ಟಿಗೆ ಗೂಡಲ್ಲಿ ಕೆಲಸ ಮಾಡುತ್ತಿದ್ದ 6 ಕಾರ್ಮಿಕರು, ಕುದುರೆ ಸಾವು

Published 26 ಡಿಸೆಂಬರ್ 2023, 11:00 IST
Last Updated 26 ಡಿಸೆಂಬರ್ 2023, 11:00 IST
ಅಕ್ಷರ ಗಾತ್ರ

ಹರಿದ್ವಾರ(ಉತ್ತರಾಖಂಡ): ಇಟ್ಟಿಗೆ ಗೂಡಿನ ಗೋಡೆ ಕುಸಿದು 6 ಕಾರ್ಮಿಕರು ಮೃತಪಟ್ಟು, 4 ಮಂದಿ ಗಾಯಗೊಂಡಿರುವ ಘಟನೆ ಉತ್ತರಾಖಂಡ ರಾಜ್ಯದ ಹರಿದ್ವಾರ ಜಿಲ್ಲೆಯ ಲಾಹ್ಬೋಲಿ ಎಂಬ ಹಳ್ಳಿಯಲ್ಲಿ ನಡೆದಿದೆ.

ಇಟ್ಟಿಗೆ ಗೂಡಿನಲ್ಲಿ ಕೆಲಸ ಮಾಡುತ್ತಿದ್ದಾಗ ಗೋಡೆ ಕುಸಿದಿದೆ. ಅವಘಡಕ್ಕೆ ಕಾರಣವಾದ ಸಂದರ್ಭದ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಎಸ್‌ಎಸ್‌ಪಿ ಪ್ರಮೇಂದ್ರ ಡೊಭಾಲ್ ತಿಳಿಸಿದ್ದಾರೆ.

ಸ್ಥಳದಲ್ಲೇ ಐವರು ಮೃತಪಟ್ಟರೆ, ಗಾಯಾಳುಗಳನ್ನು ದಾಖಲಿಸಲಾಗಿದ್ದ ರೂರ್ಕಿ ಆಸ್ಪತ್ರೆಯಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಎಸ್‌ಪಿ ಸ್ವಪ್ನನ್ ಕಿಶೋರ್ ಹೇಳಿದ್ದಾರೆ. ಗೋಡೆಯ ಅವಶೇಷಗಳಡಿ ಸಿಲುಕಿ ಒಂದು ಕುದುರೆ ಸಹ ಅಸುನೀಗಿದೆ. ಪ್ರಕರಣ ಸಂಬಂಧ ತನಿಖೆಗೆ ಆದೇಶಿಸಲಾಗಿದೆ.

ಸಾನ್ವಿ ಇಟ್ಟಿಗೆ ಗೂಡಿನಲ್ಲಿ ಅವಘಡ ಸಂಭವಿಸಿದ್ದು, ಗೋಡೆ ಕುಸಿದ ಸಂದರ್ಭ ಕಾರ್ಮಿಕರು ಇಟ್ಟಿಗೆ ತಯಾರಿಕೆಯಲ್ಲಿ ನಿರತರಾಗಿದ್ದರು. ಅರ್ತ್ ಮೂವರ್ ಯಂತ್ರದ ಮೂಲಕ ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕರನ್ನು ಹೊರಗೆ ತರಲಾಯಿತು ಎಂದು ಎಸ್‌ಪಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT