ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

FIR ರದ್ದುಪಡಿಸಲು ಚಂದ್ರಬಾಬು ನಾಯ್ಡು ಮನವಿ: ಜ.16ರಂದು ಸುಪ್ರೀಂ ಕೋರ್ಟ್‌ ತೀರ್ಪು

ಕೌಶಲ ಅಭಿವೃದ್ಧಿ ನಿಗಮ ಪ್ರಕರಣ: ಎಫ್‌ಐಆರ್ ರದ್ದುಗೊಳಿಸಲು ನಿರಾಕರಿಸಿದ ಆಂಧ್ರಪ್ರದೇಶ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ನಾಯ್ಡು. ‌‌‌
Published 14 ಜನವರಿ 2024, 9:31 IST
Last Updated 14 ಜನವರಿ 2024, 9:31 IST
ಅಕ್ಷರ ಗಾತ್ರ

ನವದೆಹಲಿ: ಕೌಶಲ ಅಭಿವೃದ್ಧಿ ನಿಗಮ ಪ್ರಕರಣದಲ್ಲಿ ತಮ್ಮ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಲು ನಿರಾಕರಿಸಿದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರು ಸಲ್ಲಿಸಿರುವ ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಜನವರಿ 16 ರಂದು ನೀಡಲಿದೆ.

ನಾಯ್ಡು ಅವರು 2015ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ ₹371 ಕೋಟಿ ನಷ್ಟ ಉಂಟಾಗಿದೆ ಎಂಬ ಆರೋಪದ ಮೇಲೆ 2023ರ ಸೆಪ್ಟೆಂಬರ್ 9 ರಂದು ಅವರನ್ನು ಬಂಧಿಸಲಾಗಿತ್ತು.

ಈ ಆರೋಪವನ್ನು ನಾಯ್ಡು ಅವರು ತಳ್ಳಿಹಾಕಿದ್ದಾರೆ. ‘ಪ್ರಕರಣದಲ್ಲಿ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಪಡೆಯದೆ ನಾಯ್ಡು ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಅವರ ಬಂಧನ ಕಾನೂನುಬಾಹಿರ' ಎಂದು ನಾಯ್ಡು ಪರ ವಕೀಲರು ವಾದಿಸಿದ್ದರು.

ಈ ಪ್ರಕರಣದಲ್ಲಿ ಆಂಧ್ರಪ್ರದೇಶ ಹೈಕೋರ್ಟ್ ಕಳೆದ ವರ್ಷ ನವೆಂಬರ್ 20ರಂದು ಅವರಿಗೆ ‌ಜಾಮೀನು ನೀಡಿತ್ತು.

ಆರೋಪಿತ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಎಫ್‌ಐಆರ್ ರದ್ದುಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಆಂಧ್ರಪ್ರದೇಶ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ನಾಯ್ಡು ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಬೇಲಾ ಎಂ. ತ್ರಿವೇದಿ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ವಿಭಾಗೀಯ ಪೀಠವು ಕಳೆದ ವರ್ಷ ಅಕ್ಟೋಬರ್ 17 ರಂದು ನಾಯ್ಡು ಅವರ ಮನವಿಯ ತೀರ್ಪನ್ನು ಕಾಯ್ದಿರಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT