ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಕ್ಕಿಂ: ಜೂನ್‌ 10ರಂದು ತಮಾಂಗ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ

Published 8 ಜೂನ್ 2024, 10:12 IST
Last Updated 8 ಜೂನ್ 2024, 10:12 IST
ಅಕ್ಷರ ಗಾತ್ರ

ಗ್ಯಾಂಗ್ಟಕ್: ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ(ಎಸ್‌ಕೆಎಂ)ದ ಶಾಸಕಾಂಗ ಪಕ್ಷದ ನಾಯಕರಾಗಿ ಪ್ರೇಮ್ ಸಿಂಗ್ ತಮಾಂಗ್‌ ಆಯ್ಕೆಯಾಗಿದ್ದು ಜೂನ್‌ 10ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. 

ಜೂನ್‌ 10ರಂದು ಇಲ್ಲಿನ ಪಾಲ್ಜೋರ್ ಕ್ರೀಡಾಂಗಣದಲ್ಲಿ ಸಂಜೆ 4 ಗಂಟೆ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. 

ಪಕ್ಷದ ಎಲ್ಲಾ ಕಾರ್ಯಕರ್ತರು, ಬೆಂಬಲಿಗರು ಮತ್ತು ಸಾರ್ವಜನಿಕರು ಈ ಐತಿಹಾಸಿಕ ಸಮಾರಂಭಕ್ಕೆ ಬರಬೇಕು ಎಂದು ಎಸ್‌ಕೆಎಂನ ಕಾರ್ಯದರ್ಶಿ ಪವನ್‌ ಗುರಂಗ್‌ ಮನವಿ ಮಾಡಿದ್ದಾರೆ.

ಕಳೆದ ಭಾನುವಾರ ನಡೆದ ಶಾಸಕಾಂಗ ಸಭೆಯಲ್ಲಿ ಪ್ರೇಮ್ ಸಿಂಗ್ ತಮಾಂಗ್‌ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿತ್ತು. ಈ ವೇಳೆ ಹೊಸದಾಗಿ ಆಯ್ಕೆಯಾಗಿದ್ದ ಪಕ್ಷದ ಎಲ್ಲ 31 ಶಾಸಕರು ಉಪಸ್ಥಿತರಿದ್ದರು.

ಏಪ್ರಿಲ್ 18ರಂದು ನಡೆದ ಸಿಕ್ಕಿಂ ವಿಧಾನಸಭಾ ಚುನಾವಣೆಯ ಫಲಿತಾಂಶ ಜೂನ್‌ 2ರಂದು ಹೊರಬಿದ್ದಿತು. ರಾಜ್ಯದ 32 ಕ್ಷೇತ್ರಗಳ ಪೈಕಿ ಎಸ್‌ಕೆಎಂ 31 ಸ್ಥಾನಗಳಲ್ಲಿ ಪ್ರಚಂಡ ಗೆಲುವು ದಾಖಲಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT