ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಭೆ ಕರೆದು, ಮುಂದಿನ ನಿರ್ಧಾರ ಪ್ರಕಟಿಸುತ್ತೇವೆ: ಸಂಯುಕ್ತ ಕಿಸಾನ್ ಮೋರ್ಚಾ

Last Updated 19 ನವೆಂಬರ್ 2021, 7:38 IST
ಅಕ್ಷರ ಗಾತ್ರ

ನವದೆಹಲಿ: ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸುವುದಾಗಿ ಘೋಷಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಧಾರವನ್ನು 40 ವಿವಿಧ ರೈತ ಸಂಘಟನೆಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಸ್ವಾಗತಿಸಿದೆ.

‘ನಮ್ಮ ಸಂಘಟನೆ ಎಲ್ಲ ವಿದ್ಯಮಾನಗಳನ್ನು ಗಮನಿಸುತ್ತಿದೆ. ಶೀಘ್ರವೇ ಸಭೆ ಕರೆದು ತಮ್ಮ ಮುಂದಿನ ನಿರ್ಧಾರ ಪ್ರಕಟಿಸಲಾಗುವುದು’ ಎಂದು ಎಸ್‌ಕೆಎಂತಿಳಿಸಿದೆ.

‘ಸಂಯುಕ್ತ ಕಿಸಾನ್ ಮೋರ್ಚಾವು ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತದೆ. ಹಾಗೆಯೇ ಸಂಸದೀಯ ಪ್ರಕ್ರಿಯೆಗಳ ಮೂಲಕ ಈ ನಿರ್ಧಾರ ಕಾರ್ಯಗತವಾಗುವುದನ್ನು ನಿರೀಕ್ಷಿಸುತ್ತದೆ’ ಎಂದು ಎಸ್‌ಕೆಎಂ ಪ್ರಕಟಣೆಯಲ್ಲಿ ತಿಳಿಸಿದೆ.

‘ಈ ರೈತರ ಹೋರಾಟ ಕೇವಲ ಮೂರು ಕರಾಳ ಕೃಷಿ ಕಾಯ್ದೆಗಳ ರದ್ದತಿಗಷ್ಟೇ ಸೀಮಿತವಾಗಿಲ್ಲ. ಬದಲಿಗೆ ಕೃಷಿ ಉತ್ಪನ್ನಗಳಿಗೆ ನೀಡುವ ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನಿನ ವ್ಯಾಪ್ತಿಗೆ ತರುವ ಕುರಿತ ಬೇಡಿಕೆಯ ಈಡೇರಿಕೆಗೂ ಸೇರುತ್ತದೆ. ಇದು ರೈತರ ಬಹು ಮುಖ್ಯ ಬೇಡಿಕೆ. ಈಗಲೂ ಇತ್ಯರ್ಥ ಆಗಿಲ್ಲ’ ಎಂದು ಎಸ್‌ಕೆಎಂ ಹೇಳಿದೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT