ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್, ಎಸ್‌ಪಿ ಪಕ್ಷಗಳಿಂದ ಅಮೇಠಿಯ ಜನರಿಗೆ ಅನ್ಯಾಯ: ಸ್ಮೃತಿ ಇರಾನಿ

Published 30 ಡಿಸೆಂಬರ್ 2023, 15:38 IST
Last Updated 30 ಡಿಸೆಂಬರ್ 2023, 15:38 IST
ಅಕ್ಷರ ಗಾತ್ರ

ಅಮೇಠಿ: ಅಮೇಠಿಯ ಜನರಿಗೆ ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷಗಳು ಅನ್ಯಾಯ ಎಸಗಿವೆ ಎಂದು ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ಆರೋಪಿಸಿದ್ದಾರೆ.

ಅಮೇಠಿಯಲ್ಲಿ ಹೇಳಿಕೆ ನೀಡಿದ ಸ್ಮೃತಿ ಇರಾನಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧವೂ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

40 ವರ್ಷ ಅಧಿಕಾರದಲ್ಲಿದ್ದವರು ಅಮೇಠಿಗಾಗಿ ಏನು ಮಾಡಿದ್ದಾರೆ ಎನ್ನುವುದನ್ನು ಹೇಳಬೇಕು. ಕಾಂಗ್ರೆಸ್ ಹಾಗೂ ಎಸ್‌ಪಿ ನಾಯಕರು ಅಮೇಠಿಯ ಜನರನ್ನು ಮೋಸ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

2019ರ ಲೋಕಸಭಾ ಚುನಾವಣೆಯಲ್ಲಿ ಅಮೇಠಿ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ವಿರುದ್ಧ ಸ್ಮೃತಿ ಇರಾನಿ ಜಯ ಸಾಧಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT