ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಸಿಯೂಟದಲ್ಲಿ ಹಾವು; ಪಶ್ಚಿಮ ಬಂಗಾಳ ಶಾಲೆಯಲ್ಲಿ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Last Updated 10 ಜನವರಿ 2023, 2:52 IST
ಅಕ್ಷರ ಗಾತ್ರ

ಕೋಲ್ಕತ್ತ: ಹಾವು ಬಿದ್ದಿದೆ ಎನ್ನಲಾದ ಬಿಸಿಯೂಟ ಸೇವಿಸಿದ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಘಟನೆ ಬಿರ್ಭೂಮ್‌ ಜಿಲ್ಲೆಯ ಮಯೂರೇಶ್ವರ ಬ್ಲಾಕ್‌ನ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ವರದಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೇಳೆ ತುಂಬಿದ್ದ ಕಂಟೈನರ್‌ವೊಂದರಲ್ಲಿ ಹಾವು ಕಾಣಿಸಿಕೊಂಡಿದೆ ಎಂದು ಬಿಸಿಯೂಟ ತಯಾರಿಸಿದ್ದ ಸಿಬ್ಬಂದಿಯೊಬ್ಬರು ಹೇಳಿಕೊಂಡಿದ್ದಾರೆ. ಮಕ್ಕಳು ವಾಂತಿ ಮಾಡಿಕೊಳ್ಳಲು ಆರಂಭಿಸಿದ್ದರಿಂದ ತಕ್ಷಣವೇ ರಾಂಪುರ್‌ಹತ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಿದೆವು ಎಂದು ಅವರು ತಿಳಿಸಿದ್ದಾರೆ.

ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಬಳಿಕ ಮಕ್ಕಳು ಅನಾರೋಗ್ಯಕ್ಕೀಡಾಗಿದ್ದಾರೆ ಎಂದು ಗ್ರಾಮದ ಹಲವರು ದೂರು ನೀಡಿದ್ದಾರೆ. ಈ ಬಗ್ಗೆ ಜಿಲ್ಲಾ ಪ್ರಾಥಮಿಕ ಶಾಲಾ ನಿರೀಕ್ಷಕರಿಗೆ ಮಾಹಿತಿ ನೀಡಲಾಗಿದೆ. ಅವರು ಇಂದು (ಜನವರಿ 10ರಂದು) ಶಾಲೆಗೆ ಭೇಟಿ ನೀಡಲಿದ್ದಾರೆ ಎಂದು ಕ್ಷೇತ್ರ ಅಭಿವೃದ್ಧಿ ಅಧಿಕಾರಿ ದೀಪಾಂಜನ್‌ ಜನಾ ಹೇಳಿದ್ದಾರೆ.

ಸದ್ಯ ಒಬ್ಬ ವಿದ್ಯಾರ್ಥಿಯನ್ನು ಹೊರತುಪಡಿಸಿ ಉಳಿದವರೆಲ್ಲ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆಸ್ಪತ್ರೆಯಲ್ಲೇ ಇರುವ ವಿದ್ಯಾರ್ಥಿಗೂ ಯಾವುದೇ ಅಪಾಯವಿಲ್ಲ ಎಂದು ದೀಪಾಂಜನ್‌ ತಿಳಿಸಿದ್ದಾರೆ.

ಪ್ರಕರಣ ಸಂಬಂಧ ಪೋಷಕರು ಶಾಲೆಯ ಮುಖ್ಯಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT