ಪೂಂಚ್/ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿ ನಡೆದ ನೆಲಬಾಂಬ್ ಸ್ಫೋಟದಲ್ಲಿ ಒಬ್ಬ ಯೋಧ ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೃಷ್ಣ ಘಾಟಿ ಬಳಿ ಗಸ್ತು ತಿರುಗುತ್ತಿದ್ದಾಗ ನೆಲಬಾಂಬ್ ಸ್ಫೋಟ ಸಂಭವಿಸಿದ್ದು, ಇದರಲ್ಲಿ ಅಗ್ನಿವೀರ ಯೋಧ ಸಾವಿಗೀಡಾಗಿದ್ದಾರೆ ಮತ್ತು ಇತರ ಇಬ್ಬರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಗಾಯಾಳುಗಳ ಪೈಕಿ ಒಬ್ಬರು ಜೆಸಿಒ ಆಗಿದ್ದು, ಮಿಲಿಟರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಕೃಷ್ಣ ಘಾಟಿಯಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಸಂಭವಿಸಿದ ನೆಲಬಾಂಬ್ ಸ್ಫೋಟದಲ್ಲಿ ಮೃತಪಟ್ಟ 7 ಜೆಎಟಿ ರೆಜಿಮೆಂಟ್ನ ಅಗ್ನಿವೀರ್ ಲಲಿತ್ ಕುಮಾರ್ ಅವರಿಗೆ ಸೇನೆ ಶ್ರದ್ಧಾಂಜಲಿ ಅರ್ಪಿಸಿದೆ ಎಂದು ನೈಟ್ ಕಾರ್ಪ್ಸ್ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.