ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜಮ್ಮು ಕಾಶ್ಮೀರದ ರಜೌರಿಯಲ್ಲಿ ಉಗ್ರರ ದಾಳಿ: ಯೋಧನಿಗೆ ಗಾಯ

Published 7 ಜುಲೈ 2024, 6:41 IST
Last Updated 7 ಜುಲೈ 2024, 6:41 IST
ಅಕ್ಷರ ಗಾತ್ರ

ರಜೌರಿ/ ಜಮ್ಮು: ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಭಾನುವಾರ ಮುಂಜಾನೆ ಉಗ್ರರು ನಡೆಸಿದ ಗುಂಡಿನ ದಾಳಿಗೆ ಸೇನಾಪಡೆಯ ಯೋಧರೊಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಂಜಕೋಟ್ ಪ್ರದೇಶದ ಗಲೂತಿಯಲ್ಲಿರುವ ಸೇನೆಯ ಕಾವಲು ಪೋಸ್ಟ್‌ ಮೇಲೆ ಮುಂಜಾನೆ 4 ಗಂಟೆಯ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಸೇನೆ ಕೂಡ ಪ್ರತಿದಾಳಿ ನಡೆಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಗುಂಡಿನ ಚಕಮಕಿಯಲ್ಲಿ ಯೋಧರೊಬ್ಬರು ಗಾಯಗೊಂಡಿದ್ದಾರೆ. ಸುಮಾರು ಅರ್ಧ ಗಂಟೆ ಗುಂಡಿನ ಕಾಳಗ ನಡೆದಿದ್ದು, ಪಕ್ಕದ ಕಾಡಿನಲ್ಲಿ ಉಗ್ರರು ಮರೆಯಾಗಿದ್ದಾರೆ. ಉಗ್ರರ ಪತ್ತೆಗೆ ಶೋಧ ಆರಂಭಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT