ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಿಕ್ಕಿಂನಲ್ಲಿ ಭಾರಿ ಮಳೆ | ದಿಢೀರ್‌ ಪ್ರವಾಹ: ಇಬ್ಬರು ಸಾವು

Published 10 ಜೂನ್ 2024, 9:49 IST
Last Updated 10 ಜೂನ್ 2024, 9:49 IST
ಅಕ್ಷರ ಗಾತ್ರ

ಗ್ಯಾಂಗ್ಟಾಕ್: ಸಿಕ್ಕಿಂನ ನಾಮ್ಚಿ ಜಿಲ್ಲೆಯಲ್ಲಿ ಇಂದು (ಸೋಮವಾರ) ಬೆಳಿಗ್ಗೆ ಭಾರಿ ಮಳೆಯಿಂದಾಗಿ ದಿಢೀರ್‌ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಮಳೆ ಸಂಬಂಧಿತ ಅವಘಡಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಾಮ್ಚಿ ಜಿಲ್ಲೆ ವ್ಯಾಪ್ತಿಯಲ್ಲಿ ಇಬ್ಬರು ಮೃತಪಟ್ಟಿದ್ದು, ಒಬ್ಬ ಮಹಿಳೆಗೆ ಗಂಭೀರ ಗಾಯಗಳಾಗಿವೆ. ಮತ್ತೊಬ್ಬರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮಜುವಾದಲ್ಲಿ ಭಾರಿ ಮಳೆಯಿಂದಾಗಿ ದಿಢೀರ್‌ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಅನೇಕ ಮನೆಗಳಿಗೆ ಹಾನಿ ಉಂಟಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ತಂಡ, ಪೊಲೀಸರು ಸೇರಿದಂತೆ ಸ್ಥಳೀಯರ ಸಹಾಯದಿಂದಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ನಾಯಕ ಪ್ರೇಮ್ ಸಿಂಗ್ ತಮಾಂಗ್ ಅವರು ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT