ಕಾರ್ಯಕ್ರಮವೊಂದಕ್ಕೆ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ಬಸ್ ದುರ್ಬುಕ್ ಪ್ರದೇಶದಲ್ಲಿ ಕಂದಕಕ್ಕೆ ಉರುಳಿದೆ ಎಂದು ಜಿಲ್ಲಾಧಿಕಾರಿ ಸಂತೋಷ್ ಸುಖದೇವ್ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಪೊಲೀಸ್ ಮತ್ತು ಜಿಲ್ಲಾಡಳಿತದವರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಪ್ರಥಮ ಚಿಕಿತ್ಸೆಯನ್ನು ಕೊಡಿಸಲಾಗಿದೆ. ಗಾಯಗೊಂಡ 22 ಜನರನ್ನು ಲೇಹ್‌ನಲ್ಲಿರುವ ಎಸ್‌ಎನ್‌ಎಂ ಆಸ್ಪತ್ರೆ ಮತ್ತು ಸೇನಾ ಆಸ್ಪತ್ರೆಗೆ ಸ್ಥಳಾಂತರಿಸಲು ಹೆಲಿಕಾಪ್ಟರ್‌ಗಳನ್ನು ಬಳಸಲಾಗುತ್ತಿದೆ ಎಂದು ಸುಖದೇವ್ ಮಾಹಿತಿ ನೀಡಿದ್ದಾರೆ.