ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೂಂಚ್‌ನಲ್ಲಿ ದಾಳಿ ನಡೆಸಿದ್ದ ಉಗ್ರರಿಗೆ ಸ್ಥಳೀಯರಿಂದ ಬೆಂಬಲ: ಜಮ್ಮು ಕಾಶ್ಮೀರ ಡಿಜಿಪಿ

Published 28 ಏಪ್ರಿಲ್ 2023, 16:24 IST
Last Updated 28 ಏಪ್ರಿಲ್ 2023, 16:24 IST
ಅಕ್ಷರ ಗಾತ್ರ

ಶ್ರೀನಗರ: ಪೂಂಚ್ ಜಲ್ಲೆಯಲ್ಲಿ ಕಳೆದ ವಾರ ನಡೆದ ಭಯೋತ್ಪಾದಕ ದಾಳಿಯಿಂದ ಐವರು ಪೊಲೀಸರು ಹತರಾದ ಪ್ರಕರಣದಲ್ಲಿ ಕೆಲವು ಸ್ಥಳೀಯರು ಭಯೋತ್ಪಾದಕರಿಗೆ ಬೆಂಬಲ ನೀಡಿರುವುದಾಗಿ ಜಮ್ಮು–ಕಾಶ್ಮೀರದ ಪೊಲೀಸ್ ಮಹಾನಿರ್ದೇಶಕ(ಡಿಜಿಪಿ) ದಿಲ್‌ಬಾಗ್ ಸಿಂಗ್ ಅವರು ಶುಕ್ರವಾರ ತಿಳಿಸಿದ್ದಾರೆ.

ಈ ಕೃತ್ಯ ಎಸಗಿದ ಭಯೋತ್ಪಾದಕರ ಶೋಧ ಕಾರ್ಯಾಚರಣೆಯ ಉಸ್ತುವಾರಿಯನ್ನು ದಿಲ್‌ಬಾಗ್ ಸಿಂಗ್ ಅವರು ವಹಿಸಿಕೊಂಡಿದ್ದಾರೆ.

ಕಾರ್ಯಾಚರಣೆ ನಿಮಿತ್ತ ರಾಜೌರಿ ಜಿಲ್ಲೆಯ ದರ್ಹಾಲ್ ಪ್ರದೇಶಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಂಗ್, 'ದಾಳಿ ನಡೆಸಿದ್ದ ಭಯೋತ್ಪಾದಕರಿಗೆ ಕೆಲವು ಸ್ಥಳೀಯರು ಆಶ್ರಯ ನೀಡಿದ್ದು, ಅವರಿಗೆ ಸಾರಿಗೆ ವ್ಯವಸ್ಥೆ ಕೂಡ ಮಾಡಿದ್ದಾರೆ‘ ಎಂದು ಹೇಳಿದರು.

‘ಸ್ಥಳೀಯರ ಸಹಕಾರವಿಲ್ಲದೆ ಅಂಥ ದಾಳಿ ಸಂಘಟಿಸಲು ಸಾಧ್ಯವಾಗದು. ಸ್ಟೀಲ್ ಲೇಪಿತ ಗುಂಡು ಹಾಗೂ ಕ‌ಚ್ಚಾ ಬಾಂಬ್‌ಗಳನ್ನು ದಾಳಿಗೆ ಬಳಸಿಕೊಳ್ಳಲಾಗಿದೆ. ಭಯೋತ್ಪಾದಕರು ನಿರ್ದಿಷ್ಟ ಪ್ರದೇಶದಲ್ಲಿ ದಾಳಿ ನಡೆಸಿದ್ದು, ಸೇನಾ ವಾಹನ ನಿಧಾನಗತಿಯಲ್ಲಿ ತಿರುವಿನಲ್ಲಿ ಚಲಿಸುತ್ತಿದ್ದಾಗ ಗುರಿಯಾಗಿಸಿಕೊಂಡರು. ರಜೌರಿ-ಪೂಂಚ್ ಪ್ರದೇಶದಲ್ಲಿ 9ರಿಂದ 12 ವಿದೇಶಿ ಭಯೋತ್ಪಾದಕರು ಸಕ್ರಿಯವಾಗಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಈ ಭಯೋತ್ಪಾದಕರು ಇತ್ತೀಚೆಗೆ ನುಸುಳಿ ಬಂದಿರಬಹುದು‘ ಎಂದೂ ಡಿಜಿಪಿ ದಿಲ್‌ಬಾಗ್‌ ಸಿಂಗ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT