ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಹಾರಾಷ್ಟ್ರದ ಗಡ್ಚಿರೋಲಿ ಅರಣ್ಯದಲ್ಲಿ ಮೂವರು ನಕ್ಸಲರ ಹತ್ಯೆ

Published 13 ಮೇ 2024, 11:34 IST
Last Updated 13 ಮೇ 2024, 11:34 IST
ಅಕ್ಷರ ಗಾತ್ರ

ಗಡ್ಚಿರೋಲಿ: ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ನಕ್ಸಲರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ನಕ್ಸಲರು ಭಮ್ರಗಡ ತಾಲೂಕಿನ ಕಟ್ರಂಘಟ್ಟ ಗ್ರಾಮದ ಬಳಿಯ ಅರಣ್ಯದಲ್ಲಿ ಬೀಡುಬಿಟ್ಟಿದ್ದರು. ನಕ್ಸಲರು ದಾಳಿ ನಡೆಸಲು ಸಂಚು ರೂಪಿಸುತ್ತಿರುವ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. ವಿಶೇಷ ಭದ್ರತಾ ಪಡೆಯೊಂದಿಗೆ ಅರಣ್ಯದಲ್ಲಿ ಶೋಧಕಾರ್ಯಾಚರಣೆ ನಡೆಸಲಾಯಿತು ಎಂದು ಪೊಲೀಸ್‌ ವರಿಷ್ಠಾಧಿಕಾರಿ ನೀಲೋತ್‌ಪಾಲ್‌ ಹೇಳಿದ್ದಾರೆ.

ಕಾರ್ಯಾಚರಣೆಯ ವೇಳೆ ನಕ್ಸಲರು ಮನಬಂದಂತೆ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದರು. ಗುಂಡಿನ ಚಕಮಕಿಯಲ್ಲಿ ಮೂವರು ನಕ್ಸಲರು ಮೃತಪಟ್ಟಿದ್ದಾರೆ. ಮೃತರಲ್ಲಿ ಒಬ್ಬನನ್ನು ಪೆರಿಮಲಿ ದಳದ ನಾಯಕ ವಾಸು ಎಂದು ಗುರುತಿಸಲಾಗಿದೆ. ಎಕೆ–47 ರೈಫೆಲ್, ಎಎನ್‌ಎಸ್‌ಎಸ್‌ ರೈಫೆಲ್‌, ನಕ್ಸಲರ ಬರವಣಿಗೆ ಸೇರಿದಂತೆ ಕೆಲವು ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನೀಲೋತ್‌ಪಾಲ್‌ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT