ನವದೆಹಲಿ: ‘ನ್ಯಾಯಾಲಯದ ಅಮೂಲ್ಯ ಸಮಯ ಉಳಿಸಲು ಹಾಗೂ ನ್ಯಾಯಾಂಗ ವ್ಯವಸ್ಥೆಯಲ್ಲಿನ ಅಸ್ತವ್ಯಸ್ತತೆಯನ್ನು ತೊಡೆದುಹಾಕಲು ಚೌಕಟ್ಟಿನಾಚೆಗಿನ ಚಿಂತನೆ ಅಗತ್ಯ’ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಅಭಿಪ್ರಾಯಪಟ್ಟಿದೆ.

ಜಾಮೀನು ಅರ್ಜಿಗಳನ್ನು ಪರಿಗಣಿಸುವಾಗ ಪಾಲಿಸಬೇಕಿರುವ ಮಾರ್ಗಸೂಚಿಗಳ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಕೆ.ಕೌಲ್ ನೇತೃತ್ವದ ತ್ರಿಸದಸ್ಯ ನ್ಯಾಯಪೀಠ, ‘ಪ್ರಕರಣವೊಂದರಲ್ಲಿ ಬಂಧಿತನಾಗಿ ಸುದೀರ್ಘ ಅವಧಿವರೆಗೆ ಜೈಲಿನಲ್ಲಿರುವ ಅಥವಾ ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿರುವ ಅಪರಾಧಿಗಳನ್ನು ಸನ್ನಡತೆ ಇಲ್ಲವೇ ಶಿಕ್ಷೆಯ ಅವಧಿ ಪೂರ್ಣಗೊಳಿಸಿರುವ ಮಾನದಂಡದ ಆಧಾರದಲ್ಲಿ ಬಿಡುಗಡೆಗೊಳಿಸಲು ಇರುವ ಮಾರ್ಗೋಪಾಯಗಳ ಕುರಿತು ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಈ ಹಿಂದೆ ಸೂಚಿಸಲಾಗಿತ್ತು. ಈ ವಿಚಾರವಾಗಿ ಏನಾದರೂ ಚರ್ಚೆಗಳು ನಡೆದಿವೆಯೇ? ಏನಾದರೂ ಬೆಳವಣಿಗೆ ಆಗಿದೆಯೇ’ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ.ನಟರಾಜ್ ಅವರನ್ನು ಪ್ರಶ್ನಿಸಿತು.

‘ಸುಪ್ರೀಂ ಕೋರ್ಟ್‌ನ ಆದೇಶದ ಬಳಿಕ ಈ ಕುರಿತು ಚರ್ಚಿಸಲಾಗಿದೆ. ಈ ಸಂಬಂಧ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳಿಗೆ ಹಲವು ಸುತ್ತೋಲೆಗಳನ್ನೂ ಹೊರಡಿಸಿದೆ’ ಎಂದು ನಟರಾಜ್ ಅವರು ನ್ಯಾಯಮೂರ್ತಿ ಎ.ಅಮನ್‌ಉಲ್ಲಾ ಮತ್ತು ಅರವಿಂದ ಕುಮಾರ್ ಅವರನ್ನೊಳಗೊಂಡ ನ್ಯಾಯಪೀಠಕ್ಕೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.